Log In
BREAKING NEWS >
ಭಾರತೀಯ ಜನತಾ ಪಕ್ಷದ ನೂತನ ರಾಷ್ಟ್ರೀಯ ಅಧ್ಯಕ್ಷರಾಗಿ ಜೆ.ಪಿ. ನಡ್ಡಾ ಆಯ್ಕೆ....ಅನಾಮಧೇಯ ವ್ಯಕ್ತಿ ಬ್ಯಾಗ್ ಇಟ್ಟಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆ: ಗೃಹ ಸಚಿವ ಬೊಮ್ಮಾಯಿ....

ಮಂಗಳೂರು: ಗಾಂಜಾ ಸಾಗಾಟ ಮಾಡುತ್ತಿದ್ದ ನಾಲ್ವರು ಆರೋಪಿಗಳನ್ನು ಬಂಧಿಸಿದ ಪೊಲೀಸರು

ಮಂಗಳೂರು: ನಗರದ ಹೊರವಲಯದ ತೊಕ್ಕೊಟ್ಟು ಬಳಿ ಗಾಂಜಾ ಸಾಗಾಟ ಮಾಡುತ್ತಿದ್ದ ನಾಲ್ವರು ಆರೋಪಿಗಳನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ.

ಬಂಧಿತರನ್ನು ಕಾಸರಗೋಡು ಕೊಡ್ಲಮೊಗರು ನಿವಾಸಿ ಅಬೂಬಕರ್ ಸಮದ್ (24), ಕಾಸರಗೋಡು ಕಡಂಬಾರು ನಿವಾಸಿಗಳಾದ ಮುಹಮ್ಮದ್ ಅಶ್ರಫ್ (30), ಮುಹಮ್ಮದ್ ಅಫ್ರಿದ್ (22) ಹಾಗೂ ಮುಹಮ್ಮದ್ ಅರ್ಷದ್ (18) ಎಂದು ಗುರುತಿಸಲಾಗಿದೆ.

ಬಂಧಿತ ಆರೋಪಿಗಳಿಂದ ಎರಡು ಲಕ್ಷ ರೂ. ಮೌಲ್ಯದ 10 ಕೆ.ಜಿ. ಗಾಂಜಾ, 2.5 ಲಕ್ಷ ಮೌಲ್ಯದ ಹುಂಡೈ ಕಾರು, 50 ಸಾವಿರ ರೂ. ಮೌಲ್ಯದ ಸ್ಕೂಟರ್, 3 ಮೊಬೈಲ್ ಫೋನ್ ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿದೆ.

No Comments

Leave A Comment