Log In
BREAKING NEWS >
ನವೆ೦ಬರ್ 26ರ೦ದು ಕರಾವಳಿಯ ಪ್ರಸಿದ್ಧ ದೇವಾಲಯವಾಸ ಶ್ರೀಕ್ಷೇತ್ರ ಧರ್ಮಸ್ಥಳದ ಲಕ್ಷದೀಪೋತ್ಸವವು ಜರಗಲಿದೆ..

ಆರ್‌ಜಿಪಿಎಸ್‌ ನಿರ್ಮಿಸಿದ ಮನೆ ಹಸ್ತಾಂತರ

ಉಡುಪಿ: ರಾಜೀವ್‌ ಗಾಂಧಿ ಪಂಚಾಯತ್‌ರಾಜ್‌ ಸಂಘಟನೆಯ (ಆರ್‌ಜಿಪಿಎಸ್‌) ವತಿಯಿಂದ ಗಾಂಧೀಜಿ 150ನೆಯ ಜನ್ಮದಿನಾಚರಣೆ ಪ್ರಯುಕ್ತ ಕೊರಂಗ್ರಪಾಡಿಯಲ್ಲಿ ಪರಿಶಿಷ್ಟ ಜಾತಿಗೆ ಸೇರಿದ ನಳಿನಿ ಅವರಿಗೆ ನಿರ್ಮಿಸಿಕೊಟ್ಟ ಮನೆಯನ್ನು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ದಿನೇಶ್‌ ಗುಂಡೂರಾವ್‌ ಬುಧವಾರ ಹಸ್ತಾಂತರಿಸಿ ಸಂಘಟನೆಯ ಸೇವಾ ಕಾರ್ಯಕ್ಕೆ ಮೆಚ್ಚುಗೆ ಸೂಚಿಸಿದರು.

ಎಐಸಿಸಿ ಕಾರ್ಯದರ್ಶಿ ವಿಷ್ಣುನಾದನ್‌, ವಿಧಾನ ಪರಿಷತ್‌ ಸದಸ್ಯ ಐವನ್‌ ಡಿ’ಸೋಜಾ, ಮಾಜಿ ಸಚಿವರಾದ ಪ್ರಮೋದ್‌ ಮಧ್ವರಾಜ್‌, ವಿನಯಕುಮಾರ ಸೊರಕೆ, ಮಾಜಿ ಶಾಸಕರಾದ ಯು.ಆರ್‌.ಸಭಾಪತಿ, ಗೋಪಾಲ ಪೂಜಾರಿ, ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಅಶೋಕ ಕುಮಾರ್‌ ಕೊಡವೂರು, ಆರ್‌ಜಿಪಿಎಸ್‌ ಜಿಲ್ಲಾ ಸಂಚಾಲಕಿ ರೋಶನಿ ಒಲಿವೆರಾ, ಅಲ್ಪಸಂಖ್ಯಾಕ ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷ ಎಂ.ಎ.ಗಫ‌ೂರ್‌, ಕಾಂಗ್ರೆಸ್‌ ಮತ್ತು ಆರ್‌ಜಿಪಿಎಸ್‌ ಮುಂದಾಳುಗಳು ಉಪಸ್ಥಿತರಿದ್ದರು.

ನಳಿನಿಯವರಿಗೆ 4.8 ಲ.ರೂ. ವೆಚ್ಚದಲ್ಲಿ 550 ಚದರಡಿಯ ಮನೆಯನ್ನು ನಿರ್ಮಿಸಿಕೊಡಲಾಗಿದೆ.

No Comments

Leave A Comment