
ಪರ್ಯಾಯ ಶ್ರೀಗಳಿ೦ದ ತುಳಸಿ ಹರಿವಾಣವನ್ನು ತಲೆಯಲಿಟ್ಟು ನೃತ್ಯ ನಡೆಸಿ ಪ್ರದಕ್ಷಿಣೆ
ಉಡುಪಿ: ಶ್ರೀ ಕೃಷ್ಣ ಮಠದಲ್ಲಿ ಚಾತುರ್ಮಾಸ್ಯ ಸಮಾಪ್ತಿಯ ದೇವಪ್ರಬೋಧಿನೀ ಏಕಾದಶಿ ಯಂದು ಪರ್ಯಾಯ ಪಲಿಮಾರು ಶ್ರೀ ವಿದ್ಯಾಧೀಶ ತೀರ್ಥ ಶ್ರೀಪಾದರು,ಭೀಮನಕಟ್ಟೆ ಮಠಾಧೀಶರಾದ ಶ್ರೀರಘುವರೇಂದ್ರ ತೀರ್ಥ ಶ್ರೀಪಾದರು ಹಾಗೂ ಪಲಿಮಾರು ಕಿರಿಯ ಯತಿಗಳಾದ ಶ್ರೀ ವಿದ್ಯಾರಾಜೇಶ್ವರ ತೀರ್ಥರು ತುಳಸಿ ಹರಿಮಾಣವನ್ನು ತಲೆಯ ಮೇಲಿಟ್ಟು “ಡಂಗುರಾವ ಸಾರಿ ಹರಿಯ ” ದಾಸರಪದಕ್ಕೆ ನೃತ್ಯ ಮಾಡಿದರು.
ಶ್ರೀ ಕೃಷ್ಣ ದೇವರಿಗೆ ರಾತ್ರಿ ಪೂಜೆ,ತುಳಸಿ ಪೂಜೆ,ಸಂಕೀರ್ತನೆ ಆದ ನಂತರ ಸೂರ್ಯವಾದ್ಯ, ನಾದಸ್ವರ, ಸಂಗೀತ, ಭಾಗವತ ಪುರಾಣಗಳು ಚಂದ್ರಶಾಲೆಯಲ್ಲಿ ನಡೆದ ನಂತರ ದೇವರ ಎದುರಿನ ಮಂಟಪದಲ್ಲಿ ಸ್ವಾಮೀಜಿಯವರು ದೇವರಿಗೆ ಮಂಗಳಾರತಿ ಮಾಡಿ ತುಳಸಿ ಹರಿವಾಣವನ್ನು ತಲೆಯಲಿಟ್ಟು ನೃತ್ಯ ನಡೆಸಿ ಪ್ರದಕ್ಷಿಣೆ ಮಾಡಿದರು.