Log In
BREAKING NEWS >
ಶ್ರೀಕೃಷ್ಣಮಠದ ಮುಖ್ಯದ್ವಾರದಲ್ಲಿ ಕನ್ನಡ ನಾಮಫಲಕ ಅಳವಡಿಕೆ-ಗದ್ದಲವೆಬ್ಬಿಸಿದ ಪೆರ೦ಪಳ್ಳಿಗೆ ತೀವ್ರ ಮುಖಭ೦ಗ........ಡಿ.6ಕ್ಕೆ ಪಲಿಮಾರು ಶ್ರೀಗಳ ಸ೦ಚಾರ ಆರ೦ಭ, ತಿರುಪತಿ ಸೇರಿದ೦ತೆ ಇತರ ಪುಣ್ಯಕ್ಷೇತ್ರಕ್ಕೆ ಭೇಟಿ ಘಣಿಕ ಚಾಲದವರೆಗೆ-ಡಿ,24ಕ್ಕೆ ಉಡುಪಿಗೆರಾಮಮಂದಿರ ನಿರ್ಮಾಣಕ್ಕೆ ಜ.15ರಿಂದ ಧನ ಸಂಗ್ರಹ ಕಾರ್ಯ; ಪೇಜಾವರ ಶ್ರೀ...

2024ರೊಳಗೆ ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ: ವಿಹೆಚ್’ಪಿ

ಇಂದೋರ್: ರಾಮ ಮಂದಿರ ಪರ ಸುಪ್ರೀಂಕೋರ್ಟ್ ನೀಡಿದ ತೀರ್ಪನ್ನು ವಿಶ್ವ ಹಿಂದೂ ಪರಿಷತ್ ಸ್ವಾಗತಿಸಿದ್ದು, 2024ರೊಳಗೆ ಮಂದಿರ ನಿರ್ಮಾಣ ಮಾಡುವುದಾಗಿ ಹೇಳಿದೆ.

ಈ ಬಗ್ಗೆ ಪ್ರತಿಕ್ರಿಯೆ ನೀಡಿದ ವಿಶ್ವ ಹಿಂದೂ ಪರಿಷತ್’ನ ಅಂತರಾಷ್ಟ್ರೀಯ ಸಮಿತಿ ಅಧ್ಯಕ್ಷ ಸದಾಶಿವ್ ಕೋಕ್ ಅವರು, ಸಿಗದಿತ ಸ್ಥಳದಲ್ಲಿ ರಾಮ ಜನ್ಮಭೂಮಿ ನ್ಯಾಸ್ ತಯಾರಿಸಿದ ನೀಲ ನಕಾಶೆಯಂತೆ 2024ರೊಳಗೆ ರಾಮ ಮಂದಿರ ನಿರ್ಮಾಣ ಮಾಡಲಾಗುವುದು ಎಂದು ಹೇಳಿದ್ದಾರೆ.

ಈ ತೀರ್ಪು ಯಾರ ಸೋಲು ಗೆಲುವಿನ ಪ್ರಶ್ನೆಯಲ್ಲ. ಸಮತೋಲಿತ ತೀರ್ಪು ನೀಡುವ ಮೂಲಕ ಸುಪ್ರೀಂಕೋರ್ಟ್ ಶತಮಾನಗಳ ವ್ಯಾಜ್ಯವನ್ನು ಬಗೆಹರಿಸಿದೆ. ಸುಪ್ರೀಂಕೋರ್ಟ್ ತೀರ್ಪಿನ ಆಧಾರದಲ್ಲಿ ಕೇಂದ್ರ ಸರ್ಕಾರ ರಚಿಸುವ ಸಮಿತಿಯ ನೇತೃತ್ವದಲ್ಲಿ ಮಂದಿರ ನಿರ್ಮಾಣ ಮಾಡಲಾಗುವುದು. ಈಗಾಗಲೇ ಎರಡು ಮಹಡಿಗಳ ಕಲ್ಲು ಕೆತ್ತನೆ ಪೂರ್ಣಗೊಂಡಿದ್ದು, 2024ರೊಳಗೆ ಮಂದಿರ ನಿರ್ಮಾಣ ಮಾಡಲಾಗುತ್ತದೆ ಎಂದು ತಿಳಿಸಿದ್ದಾರೆ.

No Comments

Leave A Comment