Log In
BREAKING NEWS >
ಉಡುಪಿ ಶ್ರೀಕೃಷ್ಣಾಪುರ ಮಠಾಧೀಶರ 4ನೇ ಪರ್ಯಾಯಕ್ಕೆ ಅದ್ದೂರಿಯ ಬಾಳೆ ಮುಹೂರ್ತ.........ರಾಮಮಂದಿರ ನಿರ್ಮಾಣಕ್ಕೆ ಜ.15ರಿಂದ ಧನ ಸಂಗ್ರಹ ಕಾರ್ಯ; ಪೇಜಾವರ ಶ್ರೀ...

ಕಣಿವೆಯಲ್ಲಿ ಮತ್ತೆ ಉಗ್ರ ಹಾವಳಿ, ಸೇನೆಯ ಗುಂಡಿಗೆ ಓರ್ವ ಭಯೋತ್ಪಾದಕ ಹತ

ಶ್ರೀನಗರ: ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಮತ್ತೆ ಉಗ್ರರ ಹಾವಳಿ ಹೆಚ್ಚಾಗಿದ್ದು, ಸೋಮವಾರ ಸೇನಾಪಡೆಯ ಕಾರ್ಯಾಚರಣೆಯಲ್ಲಿ ಓರ್ವ ಉಗ್ರ ಹತನಾಗಿದ್ದಾನೆ ಎಂದು ತಿಳಿದುಬಂದಿದೆ.

ರಾಜಧಾನಿ ಶ್ರೀನಗರದಿಂದ ಕೇವಲ 55 ಕಿಮೀ ದೂರದಲ್ಲಿರುವ ಲಾವ್ಡಾರಾ ಗ್ರಾಮದಲ್ಲಿ ನಡೆದ ಸೇನಾ ಕಾರ್ಯಾಚರಣೆಯಲ್ಲಿ ಉಗ್ರನನ್ನು ಹತ್ಯೆಗೈಯ್ಯಲಾಗಿದೆ.

ಈ ಗ್ರಾಮದಲ್ಲಿ ಉಗ್ರರು ಅವಿತಿರುವ ಕುರಿತು ಖಚಿತ ಮಾಹಿತಿ ಪಡೆದ ಭದ್ರತಾ ಪಡೆಗಳು ಶೋಧ ಕಾರ್ಯಾಚರಣೆ ಆರಂಭಿಸಿದ್ದರು. ಈ ವೇಳೆ ಸೈನಿಕರನ್ನು ಕಂಡ ಉಗ್ರರು ಗುಂಡಿನ ಸುರಿಮಳೆ ಗರೆದಿದ್ದಾರೆ. ಇದಕ್ಕೆ ಸೇನೆ ಕೂಡ ಪ್ರತ್ಯುತ್ತರ ನೀಡುತ್ತಿದ್ದು, ಸೇನೆಯ ಗುಂಡಿಗೆ ಓರ್ವ ಉಗ್ರ ಹತನಾಗಿದ್ದಾನೆ. ಪ್ರದೇಶದಲ್ಲಿ ಮೂರಕ್ಕೂ ಹೆಚ್ಚು ಉಗ್ರರು ಇರುವ ಶಂಕೆ ಇದ್ದು ಕಾರ್ಯಾಚರಣೆ ಮುಂದುವರೆದಿದೆ.

ಇನ್ನು ಅವಿತಿರುವ ಉಗ್ರರು ಯಾವ ಉಗ್ರ ಸಂಘಟನೆಗೆ ಸೇರಿದವರು ಎಂಬುದು ಇನ್ನಷ್ಟೇ ತಿಳಿಯಬೇಕಿದೆ.

No Comments

Leave A Comment