Log In
BREAKING NEWS >
ಉಡುಪಿ:ದ್ವಿತೀಯ ಪಿಯುಸಿ ಫಲಿತಾಂಶ ವಿದ್ಯೋದಯ ಪಪೂ ಕಾಲೇಜಿನ ಅಭಿಜ್ಞಾ ವಿಜ್ಞಾನದಲ್ಲಿ ಪ್ರಥಮ/PU Results: Udupi Girl Abhijna Rao Is State Science Topper.....ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಈ ಬಾರಿ ನಡೆಯ ಬೇಕಾದ ಭಜನಾ ಸಪ್ತಾಹ ಮಹೋತ್ಸವವನ್ನು ಕೋವಿಡ್-19ರ ಕಾರಣದಿ೦ದ ಮು೦ದೂಡಲಾಗಿದ್ದು ಭಜನಾ ಸಪ್ತಾಹ ಮಹೋತ್ಸವವನ್ನು 2021ನೇ ವರುಷದ ಮಾರ್ಚನಲ್ಲಿ ನಡೆಯಲಿದೆ...

ಹೈದ್ರಾಬಾದ್ : ಕಾಚಿಗೂಡು ನಿಲ್ದಾಣದಲ್ಲಿ ಎರಡು ರೈಲುಗಳ ನಡುವೆ ಮುಖಾಮುಖಿ ಡಿಕ್ಕಿ, ರಕ್ಷಣಾ ಕಾರ್ಯ ಪ್ರಗತಿಯಲ್ಲಿ-ಹಲವು ಮಂದಿಗೆ ಗಾಯ

ಹೈದ್ರಾಬಾದ್ :  ಕಾಚಿಗೂಡು ರೈಲು ನಿಲ್ದಾಣದಲ್ಲಿ ಎರಡು ರೈಲುಗಳ ಮಧ್ಯೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಅಪಘಾತದಲ್ಲಿ ಹಲವು ಮಂದಿ ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಪಾಲಾಕ್ನೂಮ್ ಕಡೆಗೆ ತೆರಳುತ್ತಿದ್ದ ಎಂಎಂಟಿಸ್ ರೈಲುವ  ಕರ್ನೂಲ್ ಕಡೆಯಿಂದ ಬರುತ್ತಿದ್ದ ಎಕ್ಸ್ ಪ್ರೆಸ್ ಗೆ ಬೆಳಗ್ಗೆ 10-30ರ ಸುಮಾರಿನಲ್ಲಿ ಡಿಕ್ಕಿ ಹೊಡೆದಿದೆ.ಅಪಘಾತದ ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಧಾವಿಸಿದ ರೈಲ್ವೆ ಅಧಿಕಾರಿಗಳು ರಕ್ಷಣಾ ಕಾರ್ಯಾಚರಣೆ ನಡೆಸಿ ನಜುಗುಜ್ಜಾದ ಬೋಗಿಯಲ್ಲಿ ಸಿಲುಕಿದ್ದ ಚಾಲಕನನ್ನು ರಕ್ಷಿಸಲಾಗಿದೆ.

ಸಿಗ್ನಲ್ ಲೋಪದಿಂದಾಗಿ ಎಂಎಂಟಿಎಸ್ ರೈಲು ಎಕ್ಸ್ ಪ್ರೆಸ್ ರೈಲಿಗೆ ಡಿಕ್ಕಿ ಹೊಡೆದಿದೆ ಎಂಬುದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಗಾಯಾಳುಗಳನ್ನು ಒಸ್ಮಾನಿಯಾ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ. ಸಾವು- ನೋವಿನ ವಿವರಗಳು ತಿಳಿದುಬಂದಿದೆ. ಸದ್ಯ, ದಕ್ಷಿಣ ಕೇಂದ್ರ ರೈಲ್ವೆ ಅಪಘಾತದ ತನಿಖೆಗೆ ಆದೇಶಿಸಿದೆ.

No Comments

Leave A Comment