Log In
BREAKING NEWS >
ಡಿ.6ಕ್ಕೆ ಪಲಿಮಾರು ಶ್ರೀಗಳ ಸ೦ಚಾರ ಆರ೦ಭ, ತಿರುಪತಿ ಸೇರಿದ೦ತೆ ಇತರ ಪುಣ್ಯಕ್ಷೇತ್ರಕ್ಕೆ ಭೇಟಿ ಘಣಿಕ ಚಾಲದವರೆಗೆ-ಡಿ,24ಕ್ಕೆ ಉಡುಪಿಗೆರಾಮಮಂದಿರ ನಿರ್ಮಾಣಕ್ಕೆ ಜ.15ರಿಂದ ಧನ ಸಂಗ್ರಹ ಕಾರ್ಯ; ಪೇಜಾವರ ಶ್ರೀ...

ಶಬರಿ ಮಲೆಗೆ ಮಹಿಳೆಯರ ಪ್ರವೇಶ ವಿಚಾರ: ವಿಸ್ತೃತ ಪೀಠಕ್ಕೆ ವರ್ಗಾಯಿಸಿದ ಸುಪ್ರೀಂ ಕೋರ್ಟ್

ನವದೆಹಲಿ: ಕೇರಳದ ಶಬರಿ ಮಲೆ ಅಯ್ಯಪ್ಪ ದೇವಾಸ್ಥಾನಕ್ಕೆ ಎಲ್ಲಾ ವಯಸ್ಸಿನ ಮಹಿಳೆಯರು ಪ್ರವೇಶಿಸಬಹುದು ಎಂದು 2018ರಲ್ಲಿ ನೀಡಿದ್ದ ತೀರ್ಪು ಮರು ಪರಿಶೀಲನೆಗೆ ಕೋರಿದ್ದ ಎಲ್ಲಾ ಅರ್ಜಿಗಳ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ವಿಸ್ತೃತ ಪೀಠಕ್ಕೆ ವರ್ಗಾಯಿಸಿದೆ.

ಶಬರಿಮಲೆಗೆ ಸಂಬಂಧಿಸಿದಂತೆ ಸೆಪ್ಚಂಬರ್ 2018ರಲ್ಲಿ ನೀಡಿದ್ದ ತೀರ್ಪಿಗೆ ಸುಪ್ರೀಂಕೋರ್ಟ್ ತಡೆಯಾಜ್ಞೆ ಅಥವಾ ಮಾರ್ಪಾಡು ಸೂಚಿಸಿಲ್ಲ.

ಧಾರ್ಮಿಕ ಸ್ವಾತಂತ್ರ್ಯ ಮತ್ತು ವಯಕ್ತಿಕ ಸ್ವಾತಂತ್ರ್ಯದ ಸಂಘರ್ಷದ ವಿಚಾರ ಇರುವುದರಿಂದ ಇನ್ನಷ್ಟು ಚರ್ಚೆ ನಡೆಸುವ ಅಗತ್ಯವಿದೆ ಎಂದು ಅಭಿಪ್ರಾಯ ಪಟ್ಟ ನ್ಯಾಯಪೀಠ 7 ನ್ಯಾಯಮೂರ್ತಿಗಳಿರುವ ವಿಸ್ತೃತ  ನ್ಯಾಯಪೀಠಕ್ಕೆ ವರ್ಗಾಯಿಸಿದೆ.

ವಿಸ್ತೃತ ನ್ಯಾಯಪೀಠದ ವಿಚಾರಣೆ ಮುಗಿದು, ತೀರ್ಪು ಹೊರ ಬೀರುವವರೆಗೂ ಹಿಂದಿನ ತೀರ್ಪು ಊರ್ಜಿತದಲ್ಲಿರುತ್ತದೆ ಎಂದು ಮುಖ್ಯ ನ್ಯಾಯಮೂರ್ತಿ ರಂಜನ್ ಗಗೋಯ್ ಅವರನ್ನೊಳಗೊಂಡ ನ್ಯಾಯಪೀಠ ಹೇಳಿದೆ.

No Comments

Leave A Comment