Log In
BREAKING NEWS >
ಡಿ.6ಕ್ಕೆ ಪಲಿಮಾರು ಶ್ರೀಗಳ ಸ೦ಚಾರ ಆರ೦ಭ, ತಿರುಪತಿ ಸೇರಿದ೦ತೆ ಇತರ ಪುಣ್ಯಕ್ಷೇತ್ರಕ್ಕೆ ಭೇಟಿ ಘಣಿಕ ಚಾಲದವರೆಗೆ-ಡಿ,24ಕ್ಕೆ ಉಡುಪಿಗೆರಾಮಮಂದಿರ ನಿರ್ಮಾಣಕ್ಕೆ ಜ.15ರಿಂದ ಧನ ಸಂಗ್ರಹ ಕಾರ್ಯ; ಪೇಜಾವರ ಶ್ರೀ...

ಶ್ರೀಕೃಷ್ಣ ಮಠದಲ್ಲಿ ಚಿಣ್ಣರ ಮಾಸೋತ್ಸವ 2019 ಉದ್ಘಾಟನೆ

ಉಡುಪಿ: ಶ್ರೀ ಕೃಷ್ಣ ಮಠದ ಮಧ್ವ ಮಂಟಪದಲ್ಲಿ,ಪರ್ಯಾಯ ಶ್ರೀ ಪಲಿಮಾರು ಮಠದ ಆಶ್ರಯದಲ್ಲಿ ಚಿಣ್ಣರ ಮಾಸೋತ್ಸವವನ್ನು ಪರ್ಯಾಯ ಪಲಿಮಾರು ಶ್ರೀವಿದ್ಯಾಧೀಶ ತೀರ್ಥ ಶ್ರೀಪಾದರು ಉದ್ಘಾಟಿಸಿ ನಮ್ಮ ದೇಶದ ಸಂವಿಧಾನದ ಆಶಯದಂತೆ ಪ್ರಜಾಪ್ರಭುತ್ವ ಭಾರತದಲ್ಲಿ ಇಂದಿನ ಮಕ್ಕಳು ಮುಂದಿನ ಪ್ರಭುಗಳಾಗಬಹುದು,ಶ್ರೀಕೃಷ್ಣನ ಅನುಗ್ರಹದಿಂದ ಇಲ್ಲಿ ಭಾಗವಹಿಸುವ ಎಲ್ಲಾ ಮಕ್ಕಳೂ ಅಂತಹ ಯೋಗ್ಯತೆಯನ್ನು ಹೊಂದುವ ಪ್ರಜೆಗಳಾಗಲಿ ಎಂದು ಆಶೀರ್ವದಿಸಿದರು.

ಅತಿಥಿಗಳಾಗಿ ಮಾಜಿ ಸಚಿವರಾದ ಪ್ರಮೋದ್ ಮಧ್ವರಾಜ್ ಭಾಗವಹಿಸಿದರು.

ಚಿಣ್ಣರ ಸಂತರ್ಪಣೆ ಯೋಜನೆಯ ಅಧ್ಯಕ್ಷರಾದ ಅರುಣ್ ಕುಮಾರ್ ರವರು ಸ್ವಾಗತಿಸಿ ಕಾರ್ಯಕ್ರಮ ನಿರ್ವಹಿಸಿದರು. ಸಾರ್ವಜನಿಕ ಸ೦ಪರ್ಕಾಧಿಕಾರಿಗಳಾದ ಶ್ರೀಶ ಭಟ್ ಉಪಸ್ಥಿತರಿದ್ದರು.

ಚಿಣ್ಣರ ಸಂತರ್ಪಣೆ ಯೋಜನೆಯ ಕಾರ್ಯದರ್ಶಿ ಶ್ರೀನಿವಾಸ್ ರಾವ್ ಧನ್ಯವಾದ ನೀಡಿದರು.

No Comments

Leave A Comment