Log In
BREAKING NEWS >
ಉಡುಪಿ ಶ್ರೀಕೃಷ್ಣಾಪುರ ಮಠಾಧೀಶರ 4ನೇ ಪರ್ಯಾಯಕ್ಕೆ ಅದ್ದೂರಿಯ ಬಾಳೆ ಮುಹೂರ್ತ.........ರಾಮಮಂದಿರ ನಿರ್ಮಾಣಕ್ಕೆ ಜ.15ರಿಂದ ಧನ ಸಂಗ್ರಹ ಕಾರ್ಯ; ಪೇಜಾವರ ಶ್ರೀ...

ಮುಂಬೈ: ಮರಾಠಿ ಚಿತ್ರದ ಹಿನ್ನಲೆ ಗಾಯಕಿ ಗೀತಾ ಮಾಲಿ ರಸ್ತೆ ಅಪಘಾತದಲ್ಲಿ ನಿಧನ

ನಾಶಿಕ್: ಮರಾಠಿ ಚಿತ್ರಗಳ ಹಿನ್ನಲೆ ಗಾಯಕಿ ಗೀತಾ ಮಾಲಿ ಥಾಣೆ ಜಿಲ್ಲೆಯ ಮುಂಬೈ-ಆಗ್ರಾ ಹೆದ್ದಾರಿಯಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ.

ಅಮೆರಿಕಾದಿಂದ ವಾಪಸ್ಸಾಗಿದ್ದ ಗೀತಾ ಮಾಲಿ ತಮ್ಮ ಪತಿ ವಿಜಯ್ ಅವರೊಂದಿಗೆ ತಮ್ಮ ತವರೂರು ನಾಶಿಕ್ ಗೆ ಕಾರಿನಲ್ಲಿ ಪ್ರಯಾಣಿಸುತ್ತಿದ್ದಾರೆ. ಈ ಸಂದರ್ಭದಲ್ಲಿ ಹೆದ್ದಾರಿಯಲ್ಲಿ ಹೋಗುತ್ತಿದ್ದಾಗ ಕಾರು ರಸ್ತೆ ಬದಿ ನಿಂತಿದ್ದ ಕಂಟೈನರ್ ಗೆ ಡಿಕ್ಕಿ ಹೊಡೆದು ಭೀಕರ ಅಪಘಾತ ಸಂಭವಿಸಿದೆ.

ನಿನ್ನೆ ಅಪರಾಹ್ನ 3 ಗಂಟೆ ಸುಮಾರಿಗೆ ಶಹಪುರದ ಲಾಹೆ ಫಾಟಾ ಹತ್ತಿರ ಈ ಅಪಘಾತ ಸಂಭವಿಸಿದ್ದು ಗೀತಾ ಮತ್ತು ಅವರ ಪತಿ ವಿಜಯ್ ಗಂಭೀರವಾಗಿ ಗಾಯಗೊಂಡಿದ್ದರು. ಅವರನ್ನು ಕೂಡಲೇ ಶಹಪುರ ಗ್ರಾಮೀಣ ಆಸ್ಪತ್ರೆಗೆ ದಾಖಲು ಮಾಡಿತ್ತಾದರೂ ಚಿಕಿತ್ಸೆ ಫಲಕಾರಿಯಾಗದೆ ಗೀತಾ ಮಾಲಿ ಮೃತಪಟ್ಟಿದ್ದಾರೆ.

No Comments

Leave A Comment