Log In
BREAKING NEWS >
~~~~~ನೂಲ ಹುಣ್ಣಿಮೆ ಹಬ್ಬ ಹಾಗೂ ರಕ್ಷಾ ಬ೦ಧನದ ಶುಭಾಶಯಗಳು~~~~

ಶೂಟಿಂಗ್ ವೇಳೆ ಕುಸಿದು ಬಿದ್ದ ‘ಗಂದಿ ಬಾತ್’ ನಟಿ!

ಮುಂಬೈ: ಗಂದಿ ಬಾತ್ ನಟಿ ಗೆಹನಾ ವಸಿಷ್ಠ ಚಿತ್ರೀಕರಣ ವೇಳೆ ಕುಸಿದು ಬಿದ್ದಿದ್ದು ಕೂಡಲೇ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ವೆಬ್ ಸರಣಿಯೊಂದರಲ್ಲಿ ಗೆಹನಾ ನಿರಂತರವಾಗಿ ಶೂಟಿಂಗ್ ನಲ್ಲಿ ಭಾಗಿಯಾಗಿದ್ದು ಈ ವೇಳೆ ಅವರಿಗೆ ಹೃದಯಾಘಾತ ಸಂಭವಿಸಿ ಕುಸಿದು ಬಿದ್ದಿದ್ದರು. ಅವರನ್ನು ಪರೀಕ್ಷಿಸಿದ ವೈದ್ಯರು ಸರಿಯಾದ ಪೌಷ್ಠಿಕಾಂಶದ ಆಹಾರ ಮತ್ತು ವಿಶ್ರಾಂತಿ ಇಲ್ಲದೇ ಇದ್ದುದ್ದರಿಂದ ಹೃದಯಾಘಾತ ಸಂಭವಿಸಿದೆ ಎಂದು ತಿಳಿಸಿದ್ದಾರೆ.

100%

ಮುಂಬೈನ ರಕ್ಷಾ ಆಸ್ಪತ್ರೆಯಲ್ಲಿ ಗೆಹನಾಗೆ ಚಿಕಿತ್ಸೆ ನೀಡಲಾಗುತ್ತಿದ್ದು ಉಸಿರಾಟಕ್ಕಾಗಿ ಅವರಿಗೆ ವೆಂಟಿಲೇಟರ್ ಅಳವಡಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ವರದಿಯಾಗಿದೆ.

100%

ಗೆಹನಾ ಕಿರುತೆರೆಯಲ್ಲಿ ನಿರೂಪಕಿಯಾಗಿ ಕೆಲವು ಕಾರ್ಯಕ್ರಮಗಳನ್ನು ನಡೆಸಿಕೊಟ್ಟಿದ್ದರು. ಅದರ ಜೊತೆಗೆ ಸುಮಾರು 70ಕ್ಕೂ ಹೆಚ್ಚು ಅಧಿಕ ಜಾಹೀರಾತುಗಳಲ್ಲಿ ಕಾಣಿಸಿಕೊಂಡಿದ್ದಾರೆ.

No Comments

Leave A Comment