Log In
BREAKING NEWS >
ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿ 91ನೇ ಭಜನಾ ಸಪ್ತಾಹ ಮಹೋತ್ಸವಕ್ಕೆ ಅದ್ದೂರಿಯ ಚಾಲನೆ.......ಉಡುಪಿಯಲ್ಲಿ ಡಿಸೆ೦ಬರ್ 13ರಿ೦ದ 15 ವರೆಗೆ ಶ್ರೀಕೃಷ್ಣಮಠದ ರಾಜಾ೦ಗಣದಲ್ಲಿ ತುಳು ಶಿವಳ್ಳಿ ಬ್ರಾಹ್ಮಣರ ಪ್ರಥಮ ವಿಶ್ವಸಮ್ಮೇಳನ ಜರಗಲಿದೆ....

ಡಾ.ಕೆ.ಸುಧಾಕರ್ ಪರ ತೆಲುಗು ಹಾಸ್ಯ ನಟ ಬ್ರಹ್ಮಾನಂದಂ ಪ್ರಚಾರ

ಚಿಕ್ಕಬಳ್ಳಾಪುರ:  ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಕೆ ಸುಧಾಕರ್ ಪರ ಪ್ರಚಾರಕ್ಕಾಗಿ ಚಂದನವನದ ನಟ ನಟಿಯರು ಕಳೆದ ಒಂದು ವಾರದಿಂದ ಕ್ಷೇತ್ರದಲ್ಲಿ ಬೀಡುಬಿಟ್ಟಿದ್ದಾರೆ.

ಸ್ಯಾಂಡಲ್‍ವುಡ್ ನಟ ನಟಿಯರ ಜೊತೆಗೆ ಟಾಲಿವುಡ್‍ನ ಖ್ಯಾತ ಹಾಸ್ಯ ನಟ ಬ್ರಹ್ಮಾನಂದಂ ಸಹ ಸಾಥ್ ನೀಡಿದ್ದಾರೆ.

ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಪರ ನೆರೆಯ ಆಂದ್ರಪ್ರದೇಶದ ಖ್ಯಾತ ಹಾಸ್ಯ ನಟ ಬ್ರಹ್ಮಾನಂದಂ ತಾಲೂಕಿನ ಪೆರೇಸಂದ್ರ ಕ್ರಾಸ್ ನಲ್ಲಿ ಬಿಜೆಪಿ ಅಭ್ಯರ್ಥಿ ಡಾ.ಕೆ.ಸುಧಾಕರ್ ಪರ ಭರ್ಜರಿ ರೋಡ್ ಶೋ ನಡೆಸುವ ಮೂಲಕ ಮತಯಾಚನೆ ಮಾಡಿದರು.

ಹೈದ್ರಾಬಾದ್ ನಿಂದ ಬೆಂಗಳೂರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿ ಅಲ್ಲಿಂದ ರಾಷ್ಟ್ರೀಯ ಹೆದ್ದಾರಿ 7 ಮೂಲಕ ಚಿಕ್ಕಬಳ್ಳಾಪುರಕ್ಕೆ ಆಗಮಿಸಿದ ಬ್ರಹ್ಮಾನಂದಂ ಸುಧಾಕರ್ ಸ್ವಗ್ರಾಮ ಪೆರೇಸಂದ್ರದಲ್ಲಿ ಸುಧಾಕರ್ ಪರ ಚುನಾವಣೆ ಪ್ರಚಾರ ನಡೆಸಿದರು.

ಸುಧಾಕರ್ ನನಗೆ ಆತ್ಮೀಯ ಸ್ನೇಹಿತ, ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸುವ ವ್ಯಕ್ತಿ. ಇಂಥವರನ್ನು ಚುನಾವಣೆಯಲ್ಲಿ ಗೆಲ್ಲಿಸಿದರೆ ಕ್ಷೇತ್ರದ ಅಭಿವೃದ್ಧಿ ಆಗುತ್ತದೆ. ಆದ್ದರಿಂದ ನಾನು ಹೈದ್ರಾಬಾದ್ ನಿಂದ ಇವರ ಪರ ಪ್ರಚಾರಕ್ಕೆ ಬಂದಿದ್ದೇನೆ. ಇವರನ್ನು ಹೆಚ್ಚಿನ ಮತಗಳಿಂದ ಗೆಲ್ಲಿಸಿ ಅವರ ಗೆಲುವಿನ ವಿಜಯೋತ್ಸವ ಕಾರ್ಯಕ್ರಮದಲ್ಲಿ ಮತ್ತೆ ನಾನು ಭಾಗವಹಿಸುತ್ತೇನೆ ಎಂದು ನೆರದಿದ್ದ ಕಾರ್ಯಕರ್ತರನ್ನು ಹುರಿದುಂಬಿಸಿದರು.

No Comments

Leave A Comment