Log In
BREAKING NEWS >
ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದ 91ನೇ ಭಜನಾ ಸಪ್ತಾಹ ಮಹೋತ್ಸವದ ನಗರ ಭಜನೆಯು ಭಾನುವಾರ ಸ೦ಜೆ 4.30ಕ್ಕೆ ದೇವಸ್ಥಾನದಿ೦ದ ಹೊರಡಲಿದೆ..........ಉಡುಪಿಯಲ್ಲಿ ಡಿಸೆ೦ಬರ್ 13ರಿ೦ದ 15 ವರೆಗೆ ಶ್ರೀಕೃಷ್ಣಮಠದ ರಾಜಾ೦ಗಣದಲ್ಲಿ ತುಳು ಶಿವಳ್ಳಿ ಬ್ರಾಹ್ಮಣರ ಪ್ರಥಮ ವಿಶ್ವಸಮ್ಮೇಳನ ಜರಗಲಿದೆ....

ಸುರತ್ಕಲ್: ಬಾರ್ ನಲ್ಲಿ ಯುವಕನನ್ನು ಮಾರಕಾಯುಧದಿಂದ ಇರಿದು ಹತ್ಯೆ

ಸುರತ್ಕಲ್: ಖಾಸಗಿ ಬಾರ್ ಒಂದರಲ್ಲಿ ಯುವಕನೋರ್ವನನ್ನು ಮಾರಕಾಯುಧದಿಂದ ಇರಿದು ಹತ್ಯೆ ಮಾಡಿದ ಘಟನೆ ನಡೆದಿದೆ.

ಗುಡ್ಡೆಕೊಪ್ಲ ನಿವಾಸಿ ಸಂದೇಶ್(30) ಎಂಬಾತ ಮೃತ ದುರ್ದೈವಿ.  ಸುರತ್ಕಲ್ ಜಂಕ್ಷನ್ ಬಳಿಯಿರುವ ಖಾಸಗಿ ಬಾರ್ ಮುಂಭಾಗ ಶುಕ್ರವಾರ ರಾತ್ರಿ 11 ಗಂಟೆಗೆ ಈ ಕೃತ್ಯ ನಡೆದಿದೆ. ಹಳೆಯ ಗೆಳೆಯರ ನಡುವೆ ಉಂಟಾದ  ಭಿನ್ನಾಭಿಪ್ರಾಯವೇ ಈ ಘಟನೆಗೆ ಕಾರಣ ಎನ್ನಲಾಗಿದ್ದು ವೈಷಮ್ಯದಿಂದ  ಮಾರಕಾಯುಧದಿಂದ ಇರಿದು ಹತ್ಯೆ ಮಾಡಿರುವ ಶಂಕೆ ವ್ಯಕ್ತವಾಗಿದೆ.

ಘಟನೆ ಸಂಬಂಧ ಹಲವರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.

ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

No Comments

Leave A Comment