Log In
BREAKING NEWS >
ಉಡುಪಿಯಲ್ಲಿ ಜೂ. 1ರಿಂದ ಸಿಟಿ ಬಸ್‌ ಸಂಚಾರ....

ಮಹಾರಾಷ್ಟ್ರ ಸ್ಪೀಕರ್ ಆಗಿ ನಾನಾ ಪಟೋಲೆ ಅವಿರೋಧ ಆಯ್ಕೆ

ಮುಂಬೈ: ಮಹಾರಾಷ್ಟ್ರ ಸ್ಪೀಕರ್ ಆಗಿ ಕಾಂಗ್ರೆಸ್ ರೈತ ನಾಯಕ ನಾನಾ ಪಟೋಲೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಬಿಜೆಪಿಯಿಂದ ಕಿಸಾನ್ ಕಠೋರೆ ನಾಮನಿರ್ದೇಶನಗೊಂಡಿದ್ದರು. ಆದರೆ, ಭಾನುವಾರ ಬೆಳಗ್ಗೆ ಪಕ್ಷ ತನ್ನ ಅಭ್ಯರ್ಥಿಯನ್ನು ಹಿಂಪಡೆದಿದ್ದರಿಂದ ಪಟೋಲೆ ಅವಿರೋಧವಾಗಿ ಆಯ್ಕೆಯಾದರು. ಬೇರೆ ಶಾಸಕರ ಮನವಿ ಮೇರೆಗೆ ಜೊತೆಗೆ ಸಭೆಯ ಗೌರವವನ್ನು ಕಾಪಾಡುವ ದೃಷ್ಟಿಯಿಂದ ಬಿಜೆಪಿ ಪಕ್ಷ ತನ್ನ ಅಭ್ಯರ್ಥಿಯನ್ನು ಹಿಂಪಡೆದಿದೆ ಎಂದು ಎನ್ ಸಿಪಿ ಮುಖಂಡ ಚಗನ್ ಭುಜಬಲ್ ತಿಳಿಸಿದರು.

ಪ್ರಧಾನಿ ನರೇಂದ್ರ ಮೋದಿ ಅವರನ್ನು ಟೀಕಿಸಿ ಬಿಜೆಪಿ ತ್ಯೆಜಿಸಿ ಕಾಂಗ್ರೆಸ್ ಸೇರಿದ್ದ ನಾನ ಪಟೋಲೆ ನಾಲ್ಕು ಬಾರಿ ಶಾಸಕರಾಗಿದ್ದಾರೆ. ವಿದರ್ಭದ ಸಕೋಲಿ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದಾರೆ. ಕೃಷಿ ಕುಟುಂಬದಿಂದ ಬಂದು 2014ರ ಲೋಕಸಭೆ ಚುನಾವಣೆಗೆ ಮುನ್ನ ಬಿಜೆಪಿ ಸೇರಿ ಭಂಡಾರ-ಗೊಂಡಿಯಾ ಕ್ಷೇತ್ರದಲ್ಲಿ ಎನ್ ಸಿಪಿಯ ಪ್ರಪುಲ್ ಪಟೇಲ್ ಅವರನ್ನು ಸೋಲಿಸಿದ್ದರು.

No Comments

Leave A Comment