Log In
BREAKING NEWS >
ಭಾರತೀಯ ಜನತಾ ಪಕ್ಷದ ನೂತನ ರಾಷ್ಟ್ರೀಯ ಅಧ್ಯಕ್ಷರಾಗಿ ಜೆ.ಪಿ. ನಡ್ಡಾ ಆಯ್ಕೆ....ಅನಾಮಧೇಯ ವ್ಯಕ್ತಿ ಬ್ಯಾಗ್ ಇಟ್ಟಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆ: ಗೃಹ ಸಚಿವ ಬೊಮ್ಮಾಯಿ....

ಪರ್ಯಾಯ ಪುರಪ್ರವೇಶದ ಆಮಂತ್ರಣ ಪತ್ರಿಕೆ: ಮುಖ್ಯಮಂತ್ರಿ ಬಿಎಸ್‌ವೈ ಬಿಡುಗಡೆ

ಉಡುಪಿ: ಶ್ರೀಕೃಷ್ಣ ಮಠದಲ್ಲಿ ಪರ್ಯಾಯ ಪೂಜೆಯನ್ನು ಕೈಗೊಳ್ಳಲಿರುವ ಶ್ರೀ ಅದಮಾರು ಮಠಾಧೀಶರು ಪರ್ಯಾಯ ಪೂರ್ವಭಾವಿ ಸಂಚಾರವನ್ನು ಮುಗಿಸಿ ಪುರಪ್ರವೇಶ ಮಾಡುವ ಆಮಂತ್ರಣ ಪತ್ರಿಕೆಯನ್ನು ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪನವರು ಶುಕ್ರವಾರ ಬೆಂಗಳೂರಿನ ಕಚೇರಿಯಲ್ಲಿ ಬಿಡುಗಡೆಗೊಳಿಸಿದರು.

ಶ್ರೀಕೃಷ್ಣ ಸೇವಾ ಬಳಗದ ಗೌರವಾಧ್ಯಕ್ಷರಾದ ಶಾಸಕ ರಘುಪತಿ ಭಟ್‌ ನೇತೃತ್ವದಲ್ಲಿ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿದ ಸಂದರ್ಭ ಆಮಂತ್ರಣ ಪತ್ರಿಕೆಯನ್ನು ಬಿಡುಗಡೆಗೊಳಿಸಲಾಯಿತು. ಗೃಹ ಸಚಿವ ಮತ್ತು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ ಬೊಮ್ಮಾಯಿ, ಜಿ.ಪಂ. ಅಧ್ಯಕ್ಷ ದಿನಕರ ಬಾಬು, ಮೀನು ಮಾರಾಟ ಫೆಡರೇಶನ್‌ ಅಧ್ಯಕ್ಷ ಯಶಪಾಲ್‌ ಸುವರ್ಣ, ಶ್ರೀಕೃಷ್ಣ ಸೇವಾ ಬಳಗದ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಪರ್ಯಾಯೋತ್ಸವಕ್ಕೆ ಮುಖ್ಯ ಮಂತ್ರಿಗಳನ್ನು ಆಮಂತ್ರಿಸಲಾಯಿತು.

No Comments

Leave A Comment