Log In
BREAKING NEWS >
ಮಂಗಳೂರು:ಡಿಸೆಂಬರ್‌ನಿಂದ ಮರಳುಗಾರಿಕೆ ಸ್ಥಗಿತ; ನಿರ್ಮಾಣ ಕಾಮಗಾರಿಗಳಿಗೆ ಸಮಸ್ಯೆ....

ಪಾಕಿಸ್ತಾನದ ಕ್ವೆಟ್ಟಾದಲ್ಲಿ ಭೀಕರ ಬಾಂಬ್ ಸ್ಫೋಟ, ಕನಿಷ್ಛ 15 ಸಾವು, 20 ಮಂದಿಗೆ ಗಾಯ

ಇಸ್ಲಾಮಾಬಾದ್: ಪಾಕಿಸ್ತಾನದ ಕ್ವೆಟ್ಟಾದಲ್ಲಿ ಭೀಕರ ಬಾಂಬ್ ಸ್ಫೋಟಗೊಂಡಿದ್ದು, ಘಟನೆಯಲ್ಲಿ ಕನಿಷ್ಟ 15 ಮಂದಿ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

ಪಾಕಿಸ್ತಾನದ ಬಲೂಚಿಸ್ತಾನದ ಕ್ವೆಟ್ಟಾದಲ್ಲಿ ಶುಕ್ರವಾರದ ಪ್ರಾರ್ಥನೆ ಬಳಿಕ ಉಗ್ರರು ಬಾಂಬ್ ಸ್ಫೋಟ ನಡೆಸಿದ್ದು, ಘಟನೆಯಲ್ಲಿ ಕನಿಷ್ಠ 15 ಮಂದಿ ಸಾವನ್ನಪ್ಪಿದ್ದಾರೆ. ಅಂತೆಯೇ 20ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.

ಈಗ್ಗೆ ಮೂರು ದಿನಗಳ ಹಿಂದಷ್ಟೇ ಇದೇ ಕ್ವೆಟ್ಟಾದಲ್ಲಿ ನಡೆದಿದ್ದ ಬಾಂಬ್ ಸ್ಫೋಟದಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ. ಬಾಂಬ್ ಸ್ಫೋಟದ ಹೊಣೆಯನ್ನು ಈ ವರೆಗೂ ಯಾವುದೇ ಉಗ್ರ ಸಂಘಟನೆ ಹೊತ್ತಿಲ್ಲವಾದರೂ ತಾಲಿಬಾನ್ ಉಗ್ರ ಸಂಘಟನೆ ಈ ಕೃತ್ಯವೆಸಗಿರಬಹುದು ಎಂದು ಶಂಕಿಸಲಾಗಿದೆ.

No Comments

Leave A Comment