Log In
BREAKING NEWS >
ಮಹಾರಾಷ್ಟ್ರದಲ್ಲಿ ಸರಕಾರಿ ನೌಕರರಿಗೆ ಉದ್ಧವ್‌ ಬಂಪರ್‌ ಗಿಫ್ಟ್‌: ವಾರಕ್ಕೆ ಐದು ದಿನ ಮಾತ್ರ ಕೆಲಸ...

ದ.ಕ.ಜಿಲ್ಲಾ ಬಿ.ಜೆ.ಪಿ.ಯ ನೂತನ ಅಧ್ಯಕ್ಷರಾಗಿ ಸುದರ್ಶನ್ ಮೂಡಬಿದ್ರೆ ಆಯ್ಕೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಭಾರತೀಯ ಜನತಾ ಪಾರ್ಟಿಯ ನೂತನ ಜಿಲ್ಲಾಧ್ಯಕ್ಷರಾಗಿ ಸುದರ್ಶನ್ ಮೂಡಬಿದ್ರೆ ಅವರು ಆಯ್ಕೆಯಾಗಿದ್ದಾರೆ.

ಚುನಾವಣೆ ಪ್ರಕಿಯೆಯು ದ.ಕ. ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಭಾನುವಾರದಂದು ನಡೆದಿದ್ದು, ಸುದರ್ಶನ್ ಮೂಡಬಿದ್ರೆ ಅವರು ಸರ್ವಾನುಮತದಿಂದ ಆಯ್ಕೆಯಾಗಿದ್ದಾರೆ. ಇವರು ಈ ಮೊದಲು ದ.ಕ ಜಿಲ್ಲಾ ಬಿಜೆಪಿಯ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾಗಿದ್ದರು.

ಬಿಜೆಪಿಯ ಹಾಲಿ ಜಿಲ್ಲಾಧ್ಯಕ್ಷ ಸಂಜೀವ ಮಠಂದೂರು ಅವರ ಅಧಿಕಾರವಧಿಯು ಕಳೆದ ಸೆಪ್ಟೆಂಬರ್‌ನಲ್ಲಿ ಮುಕ್ತಾಯಗೊಂಡಿದ್ದು, ಇವರ ಅಧ್ಯಕ್ಷತೆಯಲ್ಲಿ ಬಿಜೆಪಿ ವಿಧಾನಸಭೆ, ಲೋಕಸಭೆ ಮತ್ತು ಮನಪಾ ಚುನಾವಣೆಯಲ್ಲಿ ಅಭೂತಪೂರ್ವ ಸಾಧನೆ ದಾಖಲಿಸಿತ್ತು.

ನೂತನ ಜಿಲ್ಲಾಧ್ಯಕ್ಷರ ಆಯ್ಕೆ ಪ್ರಕ್ರಿಯೆಯನ್ನು ಜ.12ರೊಳಗೆ ಪೂರ್ಣಗೊಳಿಸುವಂತೆ ರಾಜ್ಯ ಬಿಜೆಪಿ ಘಟಕವು ಈಗಾಗಲೇ ಸೂಚನೆ ನೀಡಿತ್ತು. ರಾಜ್ಯ ಬಿಜೆಪಿ ಉಪಾಧ್ಯಕ್ಷ ನಿರ್ಮಲ ಕುಮಾರ್ ಸುರಾನಾ ಅವರ ಮೇಲುಸ್ತುವಾರಿವಲ್ಲಿ ಈ ಚುನಾವಣಾ ಪ್ರಕ್ರಿಯೆ ನಡೆಯಿತು.

ಬಿಜೆಪಿಯಲ್ಲಿ ಈ ಬಾರಿ ಮಂಡಲ ಮತ್ತು ಜಿಲ್ಲಾಧ್ಯಕ್ಷತೆಗೆ ವಯೋಮಿತಿ ನಿಗದಿ ಪಡಿಸಲಾಗಿದೆ. ಮಂಡಲ ಸಮಿತಿ ಅಧ್ಯಕ್ಷತೆಗೆ 50 ವರ್ಷ ಮತ್ತು ಜಿಲ್ಲಾಧ್ಯಕ್ಷತೆಗೆ 55 ವಯೋಮಿತಿಯನ್ನು ನಿಗದಿಪಡಿಸಿದೆ.

No Comments

Leave A Comment