Log In
BREAKING NEWS >
ಭಾರತೀಯ ಜನತಾ ಪಕ್ಷದ ನೂತನ ರಾಷ್ಟ್ರೀಯ ಅಧ್ಯಕ್ಷರಾಗಿ ಜೆ.ಪಿ. ನಡ್ಡಾ ಆಯ್ಕೆ....ಅನಾಮಧೇಯ ವ್ಯಕ್ತಿ ಬ್ಯಾಗ್ ಇಟ್ಟಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆ: ಗೃಹ ಸಚಿವ ಬೊಮ್ಮಾಯಿ....

ಸಚಿವ ಸ್ಥಾನ ಹಂಚಿಕೆ ವಿಚಾರದಲ್ಲಿ ಅಮಿತ್ ಶಾ ನಿರ್ಣಯವೇ ಅಂತಿಮ: ಬಿಎಸ್ ವೈ

ರಾಯಚೂರು: ಸಚಿವ ಸ್ಥಾನ ಹಂಚಿಕೆ ವಿಚಾರದಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ನಿರ್ಣಯವೇ ಅಂತಿಮ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸ್ಪಷ್ಟಪಡಿಸಿದರು.

ದೇವದುರ್ಗ ತಾಲೂಕಿನ ತಿಂಥಿಣಿ ಬಳಿ ಹಮ್ಮಿಕೊಂಡಿರುವ ಹಾಲುಮತ ಸಂಸ್ಕೃತಿ ವೈಭವದ ನಿಮಿತ್ತ ಆಗಮಿಸಿದ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದರು.

ಯಾರೋ ಹೇಳಿದರು ಅಂತ ಯಾರಿಗೆ ಬೇಕು ಅವರಿಗೆ ಸಚಿವ ಸ್ಥಾನ ನೀಡಲಾಗದು. ಅದನ್ನು ರಾಷ್ಟ್ರೀಯ ಅಧ್ಯಕ್ಷರೇ ನಿರ್ಧರಿಸುತ್ತಾರೆ ಯಡಿಯೂರಪ್ಪ ಎಂದರು.

ಇಂದು ಅಮಿತ್ ಶಾ ಭೇಟಿಯಾಗಲು ಹೇಳಿದ್ದರು. ಆದರೆ ಹಾಲುಮತ ಸಂಸ್ಕೃತಿ ಕಾರ್ಯಕ್ರಮ ನಿಮಿತ್ತ ಹೋಗಲಾಗಿಲ್ಲ. ಭೇಟಿಗೆ ಅವಕಾಶ ನೀಡಿದರೆ ಇಂದು ರಾತ್ರಿಯೇ ದೆಹಲಿ ತೆರಳಲಾಗುವುದು. ಸಾಧ್ಯವಾದಷ್ಟು ಶೀಘ್ರದಲ್ಲಿಯೇ ಸಂಪುಟ ವಿಸ್ತರಣೆ ಪ್ರಕ್ರಿಯೆ ಮುಗಿಸಲಾಗುವುದು ಎಂದರು.

ನಾನು ಹೊರದೇಶಕ್ಕೆ ಹೋಗುವುದೊರಳಗೆ ಸಂಪುಟ ವಿಸ್ತರಣೆ ಮಾಡುವ ಉದ್ದೇಶವಿದೆ. ಆದರೆ, ಇಂದು ಅಮಿತ್ ಶಾ ಭೇಟಿಗೆ ಅವಕಾಶ ಸಿಗದಿದ್ದಲ್ಲಿ ನಾಳೆಯಾದರೂ ಭೇಟಿ ಮಾಡುವೆ ಎಂದರು.

No Comments

Leave A Comment