Log In
BREAKING NEWS >
ಉಡುಪಿಯ ಮತ್ತೊ೦ದು ಕನ್ನಡ ವೆಬ್ ಸೈಟ್ ಸುದ್ದಿಕಿರಣ.ಕಾ೦ ಸೋಮವಾರ(ಇ೦ದು) ಲೋಕಾರ್ಪಣೆ .... ಅ.27ರ ಮ೦ಗಳವಾರದ೦ದು ಶ್ರೀಶಾರದಾ ವಿರ್ಸಜನಾ ಕಾರ್ಯಕ್ರಮವು ಜರಗಲಿದೆ.

ಉಗ್ರರ ಸಂಚು ವಿಫಲ; ಜಮ್ಮು-ಕಾಶ್ಮೀರ ಸೋಫೋರ್ ಸೇತುವೆ ಕೆಳಗೆ 3ಕೆಜಿ ಐಇಡಿ ಪತ್ತೆ

ನವದೆಹಲಿ: ಸುಮಾರು ಮೂರು ಕೆಜಿಯಷ್ಟು ಐಇಡಿ(ಸುಧಾರಿತ ಸ್ಫೋಟಕ ಸಾಧನ)ಯನ್ನು ಭದ್ರತಾ ಪಡೆ ಜಮ್ಮು-ಕಾಶ್ಮೀರದ ಸೋಪೋರ್ ಸೇತುವೆ ಕೆಳಭಾಗದಲ್ಲಿ ಪತ್ತೆಹಚ್ಚುವ ಮೂಲಕ ಉಗ್ರರ ದಾಳಿಯನ್ನು ವಿಫಲಗೊಳಿಸಿರುವ ಘಟನೆ ಸೋಮವಾರ ನಡೆದಿದೆ.

ಅಪಾರ ಪ್ರಮಾಣದಲ್ಲಿ ಐಇಡಿ ಪತ್ತೆಯಾದ ಸ್ಥಳಕ್ಕೆ ಬಾಂಬ್ ನಿಷ್ಕ್ರಿಯ ದಳ ದೌಡಾಯಿಸಿದ್ದು, ಪ್ರದೇಶವನ್ನು ಭದ್ರತಾ ಪಡೆ ಸುತ್ತುವರಿದು ಕೂಂಬಿಂಗ್ ಕಾರ್ಯಾಚರಣೆ ನಡೆಸುತ್ತಿದೆ. ಐಇಡಿಯನ್ನು ನಿಷ್ಕ್ರಿಯಗೊಳಿಸುವ ಕಾರ್ಯ ನಡೆಯುತ್ತಿದೆ ಎಂದು ವರದಿ ತಿಳಿಸಿದೆ.

33ನೇ ರಾಷ್ಟ್ರೀಯ ರೈಫಲ್ಸ್ ಮತ್ತು ಜಮ್ಮು, ಕಾಶ್ಮೀರ ಪೊಲೀಸರು ಜಂಟಿಯಾಗಿ ಶೋಧ ಕಾರ್ಯಾಚರಣೆ ನಡೆಸುತ್ತಿದ್ದ ವೇಳೆ ರಫಿಯಾಬಾದ್ ಸೇತುವೆ ಕೆಳಗೆ ಸುಮಾರು 3ಕೆಜಿಯಷ್ಟು ಐಇಡಿ ಪತ್ತೆಯಾಗಿರುವುದಾಗಿ ವರದಿ ವಿವರಿಸಿದೆ.

ಐಇಡಿ ಮೂಲಕ ಸ್ಫೋಟ ನಡೆಸುವ ಸಂಚಿನ ಹಿಂದೆ ಯಾವ ಭಯೋತ್ಪಾದಕ ಸಂಘಟನೆ ಇದೆ ಎಂಬುದನ್ನು ಇನ್ನಷ್ಟೇ ಪತ್ತೆಹಚ್ಚಬೇಕಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

No Comments

Leave A Comment