Log In
BREAKING NEWS >
"ನಾಡಿನ ಸಮಸ್ತ ಜನತೆಗೆ ಮಹಾಶಿವರಾತ್ರೆಯ ಶುಭಾಶಯಗಳು"-ನಾಡಿನೆಲ್ಲೆಡೆಯಲ್ಲಿ ಮಹಾಶಿವರಾತ್ರೆಯ ಸ೦ಭ್ರಮ:ಶಿವನ ದೇವಾಲಯಗಳಲ್ಲಿ ಜನಜ೦ಗುಲಿ

ಮಂಗಳೂರು: ಸ್ಕೂಟರ್ ಸ್ಕಿಡ್ ಆಗಿ ವಿದ್ಯಾರ್ಥಿ ಸಾವು

ಮಂಗಳೂರು: ಭಾನುವಾರ ರಾತ್ರಿ ದ್ವಿಚಕ್ರದಲ್ಲಿ ಹೋಗುತ್ತಿರುವಾಗ ತನ್ನ ವಾಹನ ಸ್ಕಿಡ್ ಆದ ಪರಿಣಾಮ ತಲೆಗೆ ಗಂಭೀರ ಗಾಯಗೊಂಡು ವಿದ್ಯಾರ್ಥಿಯೋರ್ವ ಗಂಭೀರ ಗಾಯಗೊಂಡು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಜ.13 ರ ಸೋಮವಾರ ಮುಂಜಾನೆ ಮೃತಪಟ್ಟಿದ್ದಾನೆ.

ಮೃತ ವಿದ್ಯಾರ್ಥಿಯನ್ನು ಅತ್ತಾವರ ನಿವಾಸಿ ಮೊಹಮ್ಮದ್ ಒಮರ್(18 ) ಎಂದು ಗುರುತಿಸಲಾಗಿದೆ. ಈತ ವಾಮಂಜೂರಿನ‌ ಸೈಂಟ್ ಜೋಸೆಫ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ಪ್ರಥಮ ವರ್ಷದ ಸಿವಿಲ್ ಇಂಜಿನಿಯರಿಂಗ್ ವಿದ್ಯಾರ್ಥಿಯಾಗಿದ್ದ.

No Comments

Leave A Comment