Log In
BREAKING NEWS >
"ನಾಡಿನ ಸಮಸ್ತ ಜನತೆಗೆ ಮಹಾಶಿವರಾತ್ರೆಯ ಶುಭಾಶಯಗಳು"-ನಾಡಿನೆಲ್ಲೆಡೆಯಲ್ಲಿ ಮಹಾಶಿವರಾತ್ರೆಯ ಸ೦ಭ್ರಮ:ಶಿವನ ದೇವಾಲಯಗಳಲ್ಲಿ ಜನಜ೦ಗುಲಿ

ಕಿರಿಕ್ ಪಾರ್ಟಿ ಬೆಡಗಿಗೆ ಬೆಳ್ಳಂಬೆಳಗ್ಗೆ ಐಟಿ ಶಾಕ್: ರಶ್ಮಿಕಾ ಮನೆಯಲ್ಲಿ ಪರಿಶೀಲನೆ

ಕೊಡಗು: ಕನ್ನಡ ನಟಿ ರಶ್ಮಿಕಾ ಮಂಂದಣ್ಣ ಅವರ ಮನೆ ಮೇಲೆ ಬೆಳ್ಳಂಬೆಳಗ್ಗೆ ಐಟಿ ದಾಳಿ ನಡೆದಿದೆ.

ಕೊಡಗಿನ ವಿರಾಜ ಪೇಟೆಯಲ್ಲಿರುವ ರಶ್ಮಿಕಾ ಮನೆ ಮೇಲೆ ಸುಮಾರು 7.30ಕ್ಕೆ ದಾಳಿ ನಡೆಸಿದ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.

10ಕ್ಕೂ ಹೆಚ್ಚು ಅಧಿಕಾರಿಗಳ ತಂಡ ಮನೆಯಲ್ಲಿ ಬೆಳಗ್ಗಿನಿಂದಲೂ ದಾಖಲಾತಿಗಳ ಪರಿಶೀಲನೆ ನಡೆಸುತ್ತಿದೆ.  ಶೂಟಿಂಗ್ ಗಾಗಿ ಹೊರ ಹೋಗಿರುವ ಕಾರಣ ಸದ್ಯ ರಶ್ಮಿಕಾ ಮನೆಯಲ್ಲಿಲ್ಲ.

ಕಳೆದ ಮೂರ್ನಾಲ್ಕು ವರ್ಷಗಳಲ್ಲಿ ಮನೆ ಮಾತಾಗಿರುವ ರಶ್ಮಿಕಾ ಮಂದಣ್ಣ ಆದಾಯದಲ್ಲಿ ಹೆಚ್ಚಳವಾಗಿದೆ. ಹಾಗಾಗಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗುತ್ತಿದೆ.

No Comments

Leave A Comment