Log In
BREAKING NEWS >
ದಾವಣಗೆರೆ ಮಹಾನಗರ ಪಾಲಿಕೆ: ಬಿಜೆಪಿಗೆ ಅಧಿಕಾರದ ಚುಕ್ಕಾಣಿ.....ಟಿ20 ವಿಶ್ವಕಪ್‌ ಅಭ್ಯಾಸ ಪಂದ್ಯ : ಭಾರತ ವನಿತೆಯರಿಗೆ ರೋಚಕ ಗೆಲುವು...

ಕಾರು ಅಪಘಾತ: ಚಿತ್ರ ನಟಿ ಶಬಾನಾ ಆಜ್ಮಿಗೆ ಗಂಭೀರ ಗಾಯ, ಆಸ್ಪತ್ರೆಗೆ ದಾಖಲು

ಮುಂಬೈ: ಪ್ರಸಿದ್ಧ ಚಿತ್ರನಟಿ ಶಬಾನಾ ಅಜ್ಮಿ ಪ್ರಯಾಣಿಸುತ್ತಿದ್ದ ಕಾರು ಮುಂಬೈ-ಪುಣೆ ಎಕ್ಸ್’ಪ್ರೆಸ್ ವೇಯಲ್ಲಿ ಶನಿವಾರ ಅಪಘಾತಕ್ಕೀಡಾಗಿದೆ.

ಈ ವೇಳೆ ಶಬಾನಾ ಅವರಿಗೆ ಗಾಯಗಳಾಗಿದ್ದು, ನವಿ  ಮುಂಬೈನ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಮುಂಬೈನಿಂದ 60 ಕಿಮೀ ದೂರದ ಖಾಲಾಪುರ ಬಳಿ ಶಬಾನಾ ಅವರು ಪತಿ ಜಾವೇದ್ ಅಖ್ತರ್ ಹಾಗೂ ಮತ್ತೊಬ್ಬರ ಜತೆ ಟಾಟಾ ಸಫಾರಿ ಕಾರಿನಲ್ಲಿ ಪ್ರಯಾಣಿಸುತ್ತಿದ್ದರು. ಈ ವೇಳೆ, ಕಾರಿನ ಚಾಲಕ ಓವರ್ ಟೇಕ್ ಮಾಡುವ ಭರದಲ್ಲಿ ಮುಂದೆ ಇದ್ದ ಲಾರಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿದ್ದಾನೆ.

ಈ ವೇಳೆ ಶಬಾನಾ ಹಾಗೂ ಕಾರಿನಲ್ಲಿದ್ದ ಮತ್ತೊಬ್ಬ ವ್ಯಕ್ತಿಗೆ ಗಾಯಗಳಾಗಿವೆ. ಆ ವ್ಯಕ್ತಿ ಯಾರು ಎಂಬುದು ಗೊತ್ತಾಗಿಲ್ಲ. ಜಾವೇದ್ ಅಖ್ತರ್ ಅವರು ಪಾರಾಗಿದ್ದಾರೆ. ಶುಕ್ರವಾರವಷ್ಟೇ ಅಖ್ತರ್ ತಮ್ಮ 75ನೇ ಹುಟ್ಟುಹಬ್ಬ ಆಚರಿಸಿಕೊಂಡಿದ್ದರು.

No Comments

Leave A Comment