Log In
BREAKING NEWS >
ಎಸ್‌ಪಿ ಬಾಲಸುಬ್ರಹ್ಮಣ್ಯಂ ನಿಧನ! ಶಾಶ್ವತವಾಗಿ ಹಾಡು ನಿಲ್ಲಿಸಿದ ಲೆಜೆಂಡರಿ ಗಾಯಕ!....ಎಸ್.ಪಿ.ಬಾಲಸುಬ್ರಹ್ಮಣ್ಯಂ ನಿಧನಕ್ಕೆ ಮುಖ್ಯಮಂತ್ರಿ ಯಡಿಯೂರಪ್ಪ ಸಂತಾಪ

ಕಿವೀಲ್ ನೆಲದಲ್ಲಿ ಮೊದಲ ವೈಟ್ ವಾಶ್; ಐತಿಹಾಸಿಕ ದಾಖಲೆ ಬರೆದ ಟೀಂ ಇಂಡಿಯಾ!

ಆತಿಥೇಯ ನ್ಯೂಜಿಲ್ಯಾಂಡ್ ವಿರುದ್ಧದ ಐದು ಪಂದ್ಯಗಳ ಟಿ20 ಸರಣಿಯಲ್ಲಿ ಟೀಂ ಇಂಡಿಯಾ ವೈಟ್ ವಾಶ್ ಮಾಡಿ ಕಿವೀಸ್ ನೆಲದಲ್ಲಿಐತಿಹಾಸಿಕ ದಾಖಲೆ ಬರೆದಿದೆ.

ನ್ಯೂಜಿಲ್ಯಾಂಡ್ ವಿರುದ್ಧ ಐದು ಪಂದ್ಯಗಳಲ್ಲಿ ಭರ್ಜರಿ ಗೆಲುವು ಸಾಧಿಸುವ ಮೂಲಕ ಟೀಂ ಇಂಡಿಯಾ ಇದೇ ಮೊದಲ ಬಾರಿಗೆ ನ್ಯೂಜಿಲ್ಯಾಂಡ್ ನೆಲದಲ್ಲಿ ಟಿ20 ಸರಣಿ ಗೆದ್ದ ಸಾಧನೆ ಮಾಡಿದೆ.

ಮೌಂಗನುಯಿಯಲ್ಲಿ ನಡೆದ ಐದನೇ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾ 7 ರನ್ ಗಳಿಂದ ಭರ್ಜರಿ ಗೆಲುವು ಸಾಧಿಸಿದೆ.

ಮೊದಲು ಬ್ಯಾಟಿಂಗ್ ಮಾಡಿದ್ದ ಟೀಂ ಇಂಡಿಯಾ 3 ವಿಕೆಟ್ ನಷ್ಟಕ್ಕೆ 163 ರನ್ ಪೇರಿಸಿತ್ತು. ಈ ರನ್ ಗುರಿ ಬೆನ್ನಟ್ಟಿದ ನ್ಯೂಜಿಲ್ಯಾಂಡ್ ನಿಗದಿತ ಓವರ್ ನಲ್ಲಿ 9 ವಿಕೆಟ್ ನಷ್ಟಕ್ಕೆ 156 ರನ್ ಅಷ್ಟೇ ಪೇರಿಸಲು ಸಾಧ್ಯವಾಯಿತು.

ಟೀಂ ಇಂಡಿಯಾ ಪರ ಕೆಎಲ್ ರಾಹುಲ್ 45, ರೋಹಿತ್ ಶರ್ಮಾ 60 ಮತ್ತು ಶ್ರೇಯಸ್ ಅಯ್ಯರ್ 33 ರನ್ ಪೇರಿಸಿದ್ದಾರೆ.

ನ್ಯೂಜಿಲ್ಯಾಂಡ್ ಪರ ಸೈಫರ್ಟ್ 50, ಟೇಲರ್ 53 ಮತ್ತು ಸೋಧಿ ಅಜೇಯ 16 ರನ್ ಪೇರಿಸಿದ್ದಾರೆ.

No Comments

Leave A Comment