Log In
BREAKING NEWS >
~~~~~ನೂಲ ಹುಣ್ಣಿಮೆ ಹಬ್ಬ ಹಾಗೂ ರಕ್ಷಾ ಬ೦ಧನದ ಶುಭಾಶಯಗಳು~~~~

ಖಾತೆ ಹಂಚಿಕೆ: ಜಾರಕಿಹೊಳಿಗೆ ಜಲಸಂಪನ್ಮೂಲ, ಸುಧಾಕರ್ ಗೆ ವೈದ್ಯಕೀಯ ಶಿಕ್ಷಣ

ಬೆಂಗಳೂರು: ಇತ್ತೀಚೆಗಷ್ಟೇ ಪ್ರಮಾಣ ವಚನ ಸ್ವೀಕರಿಸಿದ ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗಿದೆ ಎಂದು ವರದಿಯಾಗಿದೆ.

ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರು ನೂತನ ಸಚಿವರ ಖಾತೆ ಹಂಚಿಕೆ ಪಟ್ಟಿಯನ್ನು ಇಂದು ರಾಜ್ಯಪಾಲರಿಗೆ ತಲುಪಿಸಿದ್ದರು.

ಭಾರಿ ಕುತೂಹಲ ಮೂಡಿಸಿದ್ದ ಜಲಸಂಪನ್ಮೂಲ ಖಾತೆಯನ್ನು ಗೋಕಾಕ್ ಶಾಸಕ ರಮೇಶ್ ಜಾರಕಿಹೊಳಿಯವರಿಗೆ ನೀಡಲಾಗಿದೆ. ಉಳಿದಂತೆ ಚಿಕ್ಕಬಳ್ಳಾಪುರ ಶಾಸಕರಾದ ಕೆ. ಸುಧಾಕರ್ ಗೆ ವೈದ್ಯಕೀಯ ಶಿಕ್ಷಣ ಖಾತೆ, ಬಿ.ಸಿ ಪಾಟೀಲ್ ಅವರಿಗೆ ಅರಣ್ಯ ಇಲಾಖೆ, ಶ್ರೀಮಂತ ಪಾಟೀಲ್ ಅವರಿಗೆ ಜವಳಿ ಖಾತೆ ನೀಡಲಾಗಿದೆ.

ಉಳಿದಂತೆ ಎಸ್. ಟಿ. ಸೋಮಶೇಖರ್ ಅವರಿಗೆ ಸಹಕಾರ ಖಾತೆ ನೀಡಲಾಗಿದ್ದು, ಶಿವರಾಮ್ ಹೆಬ್ಬಾರ್ ಅವರಿಗೆ ಕಾರ್ಮಿಕ ಖಾತೆ, ನಾರಯಣ ಗೌಡ ಅವರಿಗೆ  ಪೌರಾಡಳಿತ ಮತ್ತು ತೋಟಗಾರಿಕೆ ಖಾತೆ, ಕೆ. ಗೋಪಾಲಯ್ಯ ಅವರಿಗೆ ಸಣ್ಣ ಕೈಗಾರಿಕೆ ಖಾತೆ, ಹೊಸಪೇಟೆ ಶಾಸಕ ಆನಂದ್ ಸಿಂಗ್ ಗೆ ಆಹಾರ ಮತ್ತು ನಾಗರಿಕ ಪೂರೈಕೆ ಮತ್ತು ಬೈರತಿ ಬಸವರಾಜ್ ಅವರಿಗೆ ನಗರಾಭಿವೃದ್ಧಿ ಖಾತೆ (ಬೆಂಗಳೂರು ಅಭಿವೃದ್ದಿ ಹೊರತುಪಡಿಸಿ) ನೀಡಲಾಗಿದೆ.

No Comments

Leave A Comment