Log In
BREAKING NEWS >
ಪರಿಸರಕ್ಕೆ ಕೋವಿಡ್ 19 ಉಪಕಾರ ; ಜಗತ್ತಿನಾದ್ಯಂತ ವಾಯುಮಾಲಿನ್ಯ ತೀವ್ರ ಇಳಿಕೆ.....ಕೋವಿಡ್-19: ಎಲ್ಲಾ ಅಂತಾರಾಷ್ಟ್ರೀಯ ವಿಮಾನಯಾನ ಸೇವೆ ಏಪ್ರಿಲ್ 14ರವರೆಗೆ ನಿಷೇಧ...

ಬೆಳ್ತಂಗಡಿ : ಚೂರಿಯಿಂದ ಇರಿದು ಬರ್ಬರ ಹತ್ಯೆ – ಆರೋಪಿಗಳ ಬಂಧನ

ಬೆಳ್ತಂಗಡಿ: ವ್ಯಕ್ತಿಯೊಬ್ಬನನ್ನು ರಾಡ್‌ನಿಂದ ಹೊಡೆದು, ಚೂರಿಯಿಂದ ಇರಿದು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಬೆಳ್ತಂಗಡಿ ತಾಲೂಕಿನ ಲಾಯಿಲ ಗ್ರಾಮದ ಗಾಂಧಿನಗರದಲ್ಲಿ ನಡೆದಿದ್ದು, ಆರೋಪಿಗಳನ್ನು ಬೆಳ್ತಂಗಡಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.ಕೊಲೆಯಾದ ವ್ಯಕ್ತಿಯನ್ನು ಉಮೇಶ ಸಮಗಾರ(50) ಎಂದು ಗುರುತಿಸಲಾಗಿದೆ.

ಉಮೇಶ್‌ ಮುಂಬೈಯಲ್ಲಿ ಉದ್ಯೋಗ ಮಾಡುತ್ತಿದ್ದು, ಕೆಲ ದಿನಗಳ ಹಿಂದೆ ಊರಿಗೆ ಬಂದಿದ್ದರು ಎನ್ನಲಾಗಿದೆ. ಅಲ್ಲದೇ ಜಾಗದ ವಿಚಾರಕ್ಕಾಗಿ ಅಪ್ಪ ಹಾಗೂ ಮಗನಿಂದ ಉಮೇಶ್‌ ಕೊಲೆಯಾಗಿದೆ ಎನ್ನಲಾಗಿದೆ. ಯೋಗೀಶ್‌‌ ಹಾಗೂ ಅವರ ಮಗ ಜೀವನ್‌‌ ಸೇರಿ ಉಮೇಶ್‌‌ಗೆ ಚೂರಿಯಿಂದ ಹಲ್ಲೆ ಮಾಡಿದ್ದು, ಗಾಯಗೊಂಡ ಉಮೇಶ್ ಅವರನ್ನು ಉಜಿರೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿ, ಹೆಚ್ಚಿನ ಚಿಕಿತ್ಸೆಯ ಬಗ್ಗೆ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾದರೂ, ಚಿಕಿತ್ಸೆ ಫಲಕಾರಿಯಾಗದೇ ಸೋಮವಾರ ಮುಂಜಾನೆ ಮೃತಪಟ್ಟಿದ್ದಾರೆ.

ಕೊಲೆ ಮಾಡಿದ ಆರೋಪಿಗಳನ್ನು ಯೋಗೀಶ್‌‌ ಹಾಗೂ ಜೀವನ್‌‌ ಎಂದು ಗುರುತಿಸಲಾಗಿದೆ. ಇಬ್ಬರು ಆರೋಪಿಗಳನ್ನು ಬೆಳ್ತಂಗಡಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಈ ಬಗ್ಗೆ ಬೆಳ್ತಂಗಡಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

No Comments

Leave A Comment