Log In
BREAKING NEWS >
ಕೇರಳ ವಿಮಾನ ದುರಂತ: ಮೃತರ ಸಂಖ್ಯೆ 20ಕ್ಕೆ ಏರಿಕೆ, ಹಲವರ ಸ್ಥಿತಿ ಗಂಭೀರ....

ತಲಪಾಡಿ: ರಸ್ತೆ ದಾಟುತ್ತಿದ್ದ ಲಾರಿ ಚಾಲಕನಿಗೆ ಬಸ್ ಢಿಕ್ಕಿಯಾಗಿ ಸಾವು

ಉಳ್ಳಾಲ: ಬಸ್ ಢಿಕ್ಕಿ ಹೊಡೆದು ಗಂಭೀರ ಗಾಯಗೊಂಡಿದ್ದ ಲಾರಿ ಚಾಲಕ ಇಂದು ಬೆಳಿಗ್ಗೆ ದೇರಳಕಟ್ಟೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಬೆಳಗಾವಿ ಓಬಳಾಪುರ ಮೂಲದ ಕಿರಣ್ ರಾಥೋಡ್ (22) ಮೃತಪಟ್ಟವರು. ಬೆಳಗಾವಿಯಿಂದ ಸ್ಟೀಲ್ ಲೋಡ್ ಅನ್ನು ಕಾಸರಗೋಡಿಗೆ ತಂದಿದ್ದ ರಾಥೋಡ್, ಮತ್ತೆ ವಾಪಸ್ಸಾಗುವಾಗ ಈ ಘಟನೆ ನಡೆದಿದೆ.

ತಲಪಾಡಿ ಟೋಲ್ ಗೇಟ್ ಎದುರುಗಡೆ ಲಾರಿ ನಿಲ್ಲಿಸಿ ಚಹಾ ಕುಡಿಯಲೆಂದು ರಸ್ತೆಯಲ್ಲಿದ್ದ ಸಂದರ್ಭ ಖಾಸಗಿ ಸಿಟಿ ಬಸ್ಸ್ ಢಿಕ್ಕಿ ಹೊಡೆದಿತ್ತು. ತಲಪಾಡಿಯಿಂದ ಮಂಗಳೂರಿಗೆ ತೆರಳಲು ಪ್ರಯಾಣಿಕರನ್ನು ಹತ್ತಿಸುವ ಭರಾಟೆಯಲ್ಲಿ ಒಮ್ಮಿಂದೊಮ್ಮೆಲೇ ಚಾಲಕ ಬಸ್ಸನ್ನು ತಿರುಗಿಸಿದ ಪರಿಣಾಮವಾಗಿ ರಸ್ತೆ ಬದಿಯಲ್ಲಿದ್ದ ಲಾರಿ ಚಾಲಕನಿಗೆ ಢಿಕ್ಕಿ ಹೊಡೆದಿದೆ.

ಪರಿಣಾಮ ತಲೆಗೆ ಗಂಭೀರ ಗಾಯಗೊಂಡವರನ್ನು ದೇರಳಕಟ್ಟೆ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮಂಗಳೂರು ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

No Comments

Leave A Comment