Log In
BREAKING NEWS >
"ನಾಡಿನ ಸಮಸ್ತ ಜನತೆಗೆ ಮಹಾಶಿವರಾತ್ರೆಯ ಶುಭಾಶಯಗಳು"-ನಾಡಿನೆಲ್ಲೆಡೆಯಲ್ಲಿ ಮಹಾಶಿವರಾತ್ರೆಯ ಸ೦ಭ್ರಮ:ಶಿವನ ದೇವಾಲಯಗಳಲ್ಲಿ ಜನಜ೦ಗುಲಿ

ಫೆ.16ರಂದು ಕೇಜ್ರಿವಾಲ್ ಪದಗ್ರಹಣ: ಸಮಾರಂಭಕ್ಕೆ ಪ್ರಧಾನಿ ಮೋದಿಗೆ ಆಹ್ವಾನ

ನವದೆಹಲಿ: ಭಾರೀ ವಿಜಯದೊಂದಿಗೆ ರಾಜಕೀಯ ಚರಿತ್ರೆಯಲ್ಲಿ ಹೊಸ ಅಧ್ಯಾಯ ಆರಂಭಿಸಿರುವ ಆಮ್ ಆದ್ಮಿ ಪಕ್ಷದ ನಾಯಕ ಅರವಿಂದ ಕೇಜ್ರಿವಾಲ್, ಈ ತಿಂಗಳ 16 ರಂದು ಮೂರನೇ ಅವಧಿಗೆ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಲಿದ್ದಾರೆ.

ದೆಹಲಿಯ ರಾಮಲೀಲಾ ಮೈದಾನದಲ್ಲಿ ನಡೆಯಲಿರುವ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಉಪ ರಾಜ್ಯಪಾಲ ಅನಿಲ್ ಬೈಜಾಲ್ ನೂತನ ಮುಖ್ಯಮಂತ್ರಿಗೆ ಪ್ರತಿಜ್ಞಾ ವಿಧಿ ಬೋಧಿಸಲಿದ್ದಾರೆ.

ಈ ಸಮಾರಂಭಕ್ಕೆ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರಿಗೆ ವಿಶೇಷ ಆಹ್ವಾನ ನೀಡಲಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ. ಈ ನಡುವೆ ಕೇಜ್ರಿವಾಲ್ ಅವರು 11.30ಕ್ಕೆ ದೆಹಲಿ ರಾಜ್ಯಪಾಲ ಅನಿಲ್ ಬೈಜಾಲ್  ಅವರನ್ನು ಭೇಟಿ ಮಾಡಲಿದ್ದಾರೆಂದು ವರದಿಗಳು ತಿಳಿಸಿವೆ.

No Comments

Leave A Comment