Log In
BREAKING NEWS >
ದೇಶದಲ್ಲಿ ಮುಂದುವರೆದ ಕೊರೋನಾ ಆರ್ಭಟ: ತ.ನಾಡಲ್ಲಿ ಮತ್ತಿಬ್ಬರು ಬಲಿ, ಸಾವಿನ ಸಂಖ್ಯೆ 83ಕ್ಕೆ ಏರಿಕೆ.....ಕೊರೋನಾ ಲಾಕ್'ಡೌನ್ ಎಫೆಕ್ಟ್: ಏಪ್ರಿಲ್ 30ರವರೆಗೂ ಬುಕಿಂಗ್ ಸ್ಥಗಿತಗೊಳಿಸಿದ ಏರ್ ಇಂಡಿಯಾ....

ಪ್ರಚಂಡ ಜಯಭೇರಿ ಎಫೆಕ್ಟ್; 24 ಗಂಟೆಯೊಳಗೆ ಆಮ್ ಆದ್ಮಿ ಪಕ್ಷಕ್ಕೆ 11 ಲಕ್ಷ ಜನ ಸೇರ್ಪಡೆ

ನವದೆಹಲಿ: ಅರವಿಂದ್ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಪಕ್ಷ ಚುನಾವಣೆಯಲ್ಲಿ ಪ್ರಚಂಡ ಜಯಭೇರಿ ಬಾರಿಸಿದ ನಂತರ 24 ಗಂಟೆಯೊಳಗೆ ದೇಶಾದ್ಯಂತ ಹತ್ತು ಲಕ್ಷಕ್ಕೂ ಅಧಿಕ ಮಂದಿ ಆಮ್ ಆದ್ಮಿ ಪಕ್ಷಕ್ಕೆ ಸೇರ್ಪಡೆಗೊಂಡಿರುವುದಾಗಿ ತಿಳಿಸಿದೆ.

ದೆಹಲಿ ಚುನಾವಣೆಯಲ್ಲಿ ಪಕ್ಷ ಭರ್ಜರಿ ಜಯಗಳಿಸಿದ ನಂತರ 24ಗಂಟೆಯೊಳಗೆ ಒಂದು ಮಿಲಿಯನ್ ಗೂ ಅಧಿಕ ಜನರು ಪಕ್ಷಕ್ಕೆ ಸೇರ್ಪಡೆಗೊಂಡಿರುವುದಾಗಿ ಆಪ್ ಟ್ವೀಟ್ ಮಾಡಿದೆ. ಮಿಸ್ ಕಾಲ್ ನೀಡುವ ಮೂಲಕ ಆಮ್ ಆದ್ಮಿ ಪಕ್ಷಕ್ಕೆ ಸೇರ್ಪಡೆಗೊಳ್ಳಿ ಎಂದು ಮೊಬೈಲ್ ನಂಬರ್ ಅನ್ನು ಶೇರ್ ಮಾಡಿತ್ತು ಎಂದು ವರದಿ ವಿವರಿಸಿದೆ.

70 ಸದಸ್ಯ ಬಲದ ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷ 62 ಸ್ಥಾನಗಳನ್ನು ಗೆದ್ದು ಪ್ರಚಂಡ ಜಯ ಸಾಧಿಸಿತ್ತು. 8 ಸ್ಥಾನಗಳಲ್ಲಿ ಬಿಜೆಪಿ ಗೆಲುವು ಸಾಧಿಸಿದ್ದು, ಕಾಂಗ್ರೆಸ್ ಪಕ್ಷ ಶೂನ್ಯ ಸಂಪಾದನೆಯೊಂದಿಗೆ ತೀವ್ರ ಮುಖಭಂಗ ಅನುಭವಿಸಿತ್ತು.

No Comments

Leave A Comment