Log In
BREAKING NEWS >
ನ್ಯಾಯಬೆಲೆ ಅ೦ಗಡಿಯಲ್ಲಿ ಪಡಿತರ ವಿತರಣೆಗೆಗಾಗಿ ಪರದಾಟ-ರಾಜ್ಯಸರಕಾರದಿ೦ದ ಜನರಿಗೆ ಭಾರೀ ಅನ್ಯಾಯ-ಜನರಿ೦ದ ಆಕ್ರೋಶ ....

ಬೆಂಗಳೂರು: ಹಿರಿಯ ನಟಿ ಕಿಶೋರಿ ಬಲ್ಲಾಳ್ ನಿಧನ

ಬೆಂಗಳೂರು: ಸುಮಾರು 70ಕ್ಕೂ ಹೆಚ್ಚು ಕನ್ನಡ ಸಿನಿಮಾಗಳಲ್ಲಿ ನಟಿಸಿರುವ ಹಿರಿಯ ನಟಿ ಕಿಶೋರಿ ಬಲ್ಲಾಳ್ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಕಿಶೋರಿ ಬಲ್ಲಾಳರನ್ನು ಕುಟುಂಬಸ್ಥರು ಆಸ್ಪತ್ರೆಗೆ ದಾಖಲಿಸಿದ್ದರು. ಜಯನಗರದ ಸೇವಾಕ್ಷೇತ್ರ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಇಂದು ಬೆಳಗ್ಗೆ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ.

ಕೆಲ ವರ್ಷಗಳಿಂದ ಬಣ್ಣದ ಲೋಕದಿಂದ ದೂರ ಸರಿದು ವಿಶ್ರಾಂತಿಯಲ್ಲಿದ್ದರು. ಅಜ್ಜಿ, ತಾಯಿ ಪಾತ್ರದಲ್ಲಿ ಕಿಶೋರಿ ಬಲ್ಲಾಳ್ ನಟಿಸುತ್ತಿದ್ದು, ಮನೆ ಮಾತಾಗಿದ್ದರು. ಕನ್ನಡದ ಬಹುತೇಕ ಸ್ಟಾರ್ ನಟರೊಂದಿಗೆ ಕಿಶೋರಿ ಬಲ್ಲಾಳ್ ನಟಿಸಿದ್ದರು.

No Comments

Leave A Comment