Log In
BREAKING NEWS >
ಉಡುಪಿಯಲ್ಲಿ ಜೂ. 1ರಿಂದ ಸಿಟಿ ಬಸ್‌ ಸಂಚಾರ....

ರಾಸಾಯನಿಕ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಫೋಟ: 4 ಕಾರ್ಮಿಕರು ಸಾವು, 27 ಮಂದಿಗೆ ಗಾಯ

ಹರಿಯಾಣ: ರಾಸಾಯನಿಕ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಫೋಟಗೊಂಡ ಪರಿಣಾಮ ಕನಿಷ್ಠ ನಾಲ್ವರು ಕಾರ್ಮಿಕರು ಸಾವನ್ನಪ್ಪಿ, 27 ಕ್ಕೂ ಹೆಚ್ಚು ಮಂದಿ ತೀವ್ರವಾಗಿ ಗಾಯಗೊಂಡ ಘಟನೆ ಬಲ್ಲಾಗಢ್ ನಲ್ಲಿ ಶುಕ್ರವಾರ ರಾತ್ರಿ ನಡೆದಿದೆ ಎಂದು ಮಾಧ್ಯಮದ ವರದಿ ತಿಳಿಸಿದೆ.

ಘಟನೆ ಕುರಿತು ಮಾಹಿತಿ ನೀಡಿದ ಪೊಲೀಸರು, ಕಾರ್ಖಾನೆಯಲ್ಲಿ ಬಾಯ್ಲರ್ ಸ್ಪೋಟಗೊಂಡಿದೆ. ಸುತ್ತಲೂ ಬೆಂಕಿ ಆವರಿಸಿದ್ದು ರಕ್ಷಣಾ ಕಾರ್ಯಾಚರಣೆಗೆ ತೊಡಕಾಗುತ್ತಿದೆ. ಕಾರ್ಖಾನೆಯೊಳಗೆ ಇನ್ನು ಹಲವರು ಸಿಲುಕಿರುವ ಸಾಧ್ಯತೆ ಎಂದು ಎಂದು ಮಾಧ್ಯಮಕ್ಕೆ ತಿಳಿಸಿದ್ದಾರೆ.

ಘಟನೆಯಲ್ಲಿ ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಶೂ (ಪಾದರಕ್ಷೆ) ಕಾರ್ಖಾನೆಯಲ್ಲಿ ಈ ಅವಘಡ ನಡೆದಿದ್ದು, ಬೆಂಕಿ ಇತರ ಮೂರು ಕಟ್ಟಡಗಳಿಗೆ ಹಬ್ಬಿದೆ ಎಂದು ತಿಳಿದುಬಂದಿದೆ.

ಬಾಯ್ಲರ್ ಸ್ಪೋಟಗೊಳ್ಳಲು ಕಾರಣವೇನು ಎಂಬುದು ನಿಖರವಾಗಿ ತಿಳಿದಿಲ್ಲ. ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ, ಪೊಲೀಸ್ ಅಧಿಕಾರಿಗಳು, ಸ್ಥಳೀಯ ಅಧಿಕಾರಿಗಳು ಧಾವಿಸಿ ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದ್ದರು ಎಂದು ವರದಿಯಾಗಿದೆ.

No Comments

Leave A Comment