Log In
BREAKING NEWS >
ಉಡುಪಿಯಲ್ಲಿ ಜೂ. 1ರಿಂದ ಸಿಟಿ ಬಸ್‌ ಸಂಚಾರ....

ಮಂಗಳೂರು: ಕಟ್ಟಡ ಕಾಮಗಾರಿ ವೇಳೆ ಭೂಕುಸಿತ, ಇಬ್ಬರು ಸಾವು

ಮಂಗಳೂರು: ಕಟ್ಟಡ ಕಾಮಗಾರಿ ವೇಳೆ  ಕಾರ್ಮಿಕರ ಮೇಲೆ ಮಣ್ಣು ಕುಸಿದು ಇಬ್ಬರು ಸಾವನ್ನಪ್ಪಿದ ಘಟನೆ ನಗರದ ಬಂಟ್ಸ್ ಹಾಸ್ಟೆಲ್‌ನ ಕರಂಗಲ್ಪಾಡಿ ಜಂಕ್ಷನ್ ಬಳಿ ಶುಕ್ರವಾರ ಮಧ್ಯಾಹ್ನ ನಡೆದಿದೆ.

ಮಣ್ಣಿನಡಿ ಇನ್ನೂ ಕೆಲವರು ಸಿಲುಕಿರುವ ಶಂಕೆ ವ್ಯಕ್ತಪಡಿಸಲಾಗಿದೆ.  ಮೃತಪಟ್ಟವರನ್ನು ಬಾಗಲಕೋಟೆ ಮೂಲದ ಭೀಮೇಶ್ (25ವ) ಮತ್ತು ಪಶ್ಚಿಮ ಬಂಗಾಳ ಮೂಲದ ಮೊಸ್ರಿಗುಲ್ (20ವ) ಎಂದು ಗುರುತಿಸಲಾಗಿದೆ.

ಈಗಾಗಲೇ ನಾಲ್ಕು ಮಂದಿಯನ್ನು ರಕ್ಷಣೆ ಮಾಡಲಾಗಿದ್ದು,  ಮಣ್ಣಿನಡಿ ಸಿಲುಕಿರುವ ಕಾರ್ಮಿಕರ ರಕ್ಷಣಾ ಕಾರ್ಯಾಚರಣೆ ಭರದಿಂದ ನಡೆಯುತ್ತಿದೆ.

ಪಾಂಡೇಶ್ವರ ಹಾಗೂ ಕದ್ರಿಯ ಅಗ್ನಿ ಶಾಮಕ ವಾಹನಗಳು ಸ್ಥಳಕ್ಕೆ ಧಾವಿಸಿವೆ.

No Comments

Leave A Comment