Log In
BREAKING NEWS >
ಉಡುಪಿಯಲ್ಲಿ ಜೂ. 1ರಿಂದ ಸಿಟಿ ಬಸ್‌ ಸಂಚಾರ....

ಹಿರಿಯ ಫುಟ್ಬಾಲಿಗ ಪಿ.ಕೆ. ಬ್ಯಾನರ್ಜಿ ನಿಧನ

ಕೋಲ್ಕೊತಾ: ದೀರ್ಘಕಾಲದಿಂದ ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ದಿಗ್ಗಜ ಫುಟ್ಬಾಲ್ ಆಟಗಾರ ಪಿ.ಕೆ. ಬ್ಯಾನರ್ಜಿ ಶುಕ್ರವಾರ ಇಲ್ಲಿನ ಖಾಸಗಿ ಆಸ್ಪತ್ರೆಯಲ್ಲಿ ಅಸುನೀಗಿದ್ದಾರೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

ಅವರಿಗೆ 83 ವರ್ಷ ವಯಸ್ಸಾಗಿತ್ತು. ಕಳೆದ ಎರಡು ವಾರಗಳಿಗೂ ಅಧಿಕ ಸಮಯ ಅವರನ್ನು ಇಲ್ಲಿನ ಮೆಡಿಕಾ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ತೀವ್ರ ನಿಗಾ ಘಟಕದಲ್ಲಿರಿಸಲಾಗಿತ್ತು.

ಮಾರ್ಚ್ 2ರಂದು ಆಸ್ಪತ್ರೆಗೆ ದಾಖಲಾಗಿದ್ದ ಅವರು ಶುಕ್ರವಾರ ಮಧ್ಯಾಹ್ನ ನಿಧನರಾಗಿದ್ದಾರೆ ಎಂದು ಅವರ ಕುಟುಂಬದ ಸದಸ್ಯರೊಬ್ಬರು ತಿಳಿಸಿದ್ದಾರೆ.

ಎರಡು ಬಾರಿಯ ಒಲಿಂಪಿಯನ್ ಮತ್ತು 1962ರ ಏಷ್ಯನ್ ಗೇಮ್ಸ್ ನಲ್ಲಿ ಚಿನ್ನದ ಪದಕ ಗೆದ್ದ ಭಾರತ ತಂಡದ ಪರ ಏಕೈಕ ಗೋಲ್ ಗಳಿಸಿದ ಬ್ಯಾನರ್ಜಿ ಅವರು ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.

ಫುಟ್ಬಾಲ್ ಕ್ಷೇತ್ರದಲ್ಲಿ ಆಟಗಾರ ಮತ್ತು ತರಬೇತುದಾರರಾಗಿ ಗುರುತಿಸಿಕೊಂಡಿದ್ದ ಬ್ಯಾನರ್ಜಿ ದೇಶದ ಕ್ರೀಡೆಯನ್ನು ಹೊಸ ಎತ್ತರಕ್ಕೆ ಕೊಂಡೊಯ್ದವರಲ್ಲಿ ಒಬ್ಬರು.

1960 ರ ಬೇಸಿಗೆ ಒಲಿಂಪಿಕ್ಸ್‌ನಲ್ಲಿ ಫ್ರಾನ್ಸ್ ವಿರುದ್ಧ ಅಸಾಧಾರಣ ಪ್ರದರ್ಶನ,  1962 ರ ಏಷ್ಯನ್ ಕ್ರೀಡಾಕೂಟದಲ್ಲಿ ಅವರು ನಿಡಿದ್ದ ಪ್ರದರ್ಶನ ಸ್ಮರಣೀಯವಾಗಿದ್ದವು.

ಪೂರ್ವ ಬಂಗಾಳ, ಮೋಹನ್ ಬಗಾನ್ ಮತ್ತು ರಾಷ್ಟ್ರೀಯ ತಂಡದ ತರಬೇತುದಾರರಾಗಿ ಸೇವೆ ಸಲ್ಲಿಸಿದ್ದ ಬ್ಯಾನರ್ಜಿ ಆ ತಂಡದ ಸದಸ್ಯರು ಸ್ವರಣ ವಿಜೇತರಾಗುವಂತೆ ಮಾಡಿದ್ದರು.

ಪಶ್ಚಿಮ ಬಂಗಾಳದ ಉತ್ತರ ಭಾಗದ ಪ್ರಮುಖ ಪಟ್ಟಣಗಳಲ್ಲಿ ಒಂದಾದ ಜಲ್ಪೈಗುರಿಯಲ್ಲಿ ಜನಿಸಿದ ಬ್ಯಾನರ್ಜಿ ಜಮ್ಷೇಡ್ಪುರದಲ್ಲಿ  ಶಾಲಾ ಶಿಕ್ಷಣವನ್ನು ಪೂರ್ಣಗೊಳಿಸಿದರು ಮತ್ತು ಸಂತೋಷ್ ಟ್ರೋಫಿಯಲ್ಲಿ ಬಿಹಾರ ಜರ್ಸಿ ಧರಿಸುವ ಮೂಲಕ ಫುಟ್ಬಾಲ್ ಕ್ರೀಡಾಲೋಕಕ್ಕೆ ಪಾದಾರ್ಪಣೆ ಮಾಡಿದ್ದರು.

No Comments

Leave A Comment