Log In
BREAKING NEWS >
ಉಡುಪಿಯಲ್ಲಿ ಜೂ. 1ರಿಂದ ಸಿಟಿ ಬಸ್‌ ಸಂಚಾರ....

ಏಪ್ರಿಲ್ 20ರ ನಂತರ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಕುರಿತು ನಿರ್ಧಾರ: ಶಿಕ್ಷಣ ಇಲಾಖೆ

ಬೆಂಗಳೂರು: ಕೊರೋನಾ ಸೋಂಕು ತಡೆಗಾಗಿ ರಾಷ್ಟ್ರಾದ್ಯಂತ ಏಪ್ರಿಲ್ 14ರ ವರೆಗೆ ಲಾಕ್ ಡೌನ್ ಘೋಷಿಸಿರುವ ಹಿನ್ನೆಲೆಯಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆ ನಡೆಸುವ ಕುರಿತು ಏ.20ರ ಬಳಿಕ ನಿರ್ಧರಿಸಲಾಗುವುದು ಎಂದು ಸರ್ಕಾರ ತಿಳಿಸಿದೆ.

ಈ ಕುರಿತು ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತರು ಗುರುವಾರ ಸುತ್ತೋಲೆ ಹೊರಡಿಸಿದ್ದು, 7, 8 ಮತ್ತು 9ನೇ ತರಗತಿ ಪರೀಕ್ಷೆಗಳನ್ನು ಸಹ ಏ.20ರ ವರೆಗೆ ಮುಂದೂಡಲಾಗಿದೆ ಎಂದು ತಿಳಿಸಿದೆ.

2020-21ನೇ ಸಾಲಿನ ದಾಖಲಾತಿ ಹಾಗೂ ಶಿಕ್ಷಣ ಹಕ್ಕು ಕಾಯ್ದೆಯಡಿಯಲ್ಲಿ(ಆರ್ ಟಿ ಇ) ಮಕ್ಕಳ ದಾಖಲಾತಿ ಪ್ರಕ್ರಿಯೆಗಳನ್ನು ಸಹ ಏ.20ರ ವರೆಗೆ ಮುಂದೂಡಲಾಗಿದೆ, ಆ ಬಳಿಕವಷ್ಟೇ ಈ ಎಲ್ಲ ವಿಷಯಗಳಲ್ಲಿ ಪರಿಷ್ಕೃತ ವೇಳಾಪಟ್ಟಿ ಪ್ರಕಟಿಸಲಾಗುವುದು ಎಂದು ತಿಳಿಸಲಾಗಿದೆ.

ಸಾಮಾಜಿಕ ಜಾಲತಾಣದಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆ ರದ್ದಾಗಿದೆ ಎಂಬ ಒಂದು ಅಪ್ಪಟ ಸುಳ್ಳು ಸುದ್ಧಿ ಹರಿದಾಡುತ್ತಿದೆ. ಎಸ್ಸೆಸ್ಸೆಲ್ಸಿ ಪರೀಕ್ಷೆ ರದ್ದುಮಾಡುವ ಯಾವುದೇ ನಿರ್ಧಾರ ಕೈಗೊಂಡಿಲ್ಲ. ಪರೀಕ್ಷೆಗಳ ಕುರಿತು ಚರ್ಚಿಸಲು ಯಾವುದೇ ಸಭೆಯೂ ಆಗಿಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್‌. ಸುರೇಶ್ ಕುಮಾರ್ ಗುರುವಾರ ಟ್ವೀಟ್ ಮೂಲಕ ಸ್ಪಷ್ಟಪಡಿಸಿದ್ದಾರೆ.

No Comments

Leave A Comment