Log In
BREAKING NEWS >
ಉಡುಪಿಯಲ್ಲಿ ಜೂ. 1ರಿಂದ ಸಿಟಿ ಬಸ್‌ ಸಂಚಾರ....

ಕೋವಿಡ್-19: ತೀವ್ರ ಹದಗೆಟ್ಟ ಬ್ರಿಟನ್ ಪ್ರಧಾನಿ ಆರೋಗ್ಯ: ಐಸಿಯುಗೆ ದಾಖಲು ಅ ಅ

ಲಂಡನ್: ಕೋವಿಡ್-19 ಸೋಂಕು ಬ್ರಿಟನ್ ಪ್ರಧಾನಿ ಬೋರಿಸ್​ ಜಾನ್ಸನ್ ​ಗೂ ಕಂಟಕವಾಗಿ ಪರಿಣಮಿಸಿದ್ದು  ಆರೋಗ್ಯ ತೀವ್ರ ಹದಗೆಟ್ಟ ಹಿನ್ನಲೆಯಲ್ಲಿ ಅವರನ್ನು ತುರ್ತು ನಿಗಾ ಘಟಕಕ್ಕೆ (ಐಸಿಯು) ಸ್ಥಳಾಂತರಿಸಲಾಗಿದೆ ಎಂದು ವರದಿ ತಿಳಿಸಿದೆ.

ಕೋವಿಡ್ 19 ವೈರಸ್  ದೃಢಪಟ್ಟಿದ್ದರಿಂದ ಬೋರಿಸ್​ ಜಾನ್ಸನ್ ಸೆಲ್ಫ್ ಕ್ವಾರಂಟೈನ್ ಗೆ ಒಳಗಾಗಿದ್ದರು, ಆದರೆ ಭಾನುವಾರ ಸಂಜೆ ವಿಪರೀತ ಜ್ವರದ ಕಾರಣ ಲಂಡನ್ ನ ಸೇಂಟ್ ಥಾಮಸ್ ಆಸ್ಪತ್ರೆಗೆ ದಾಖಲಾಗಿದ್ದರು. ಅವರ ಆರೋಗ್ಯ ತೀವ್ರ ಹದಗೆಟ್ಟಿದ್ದರಿಂದ  ಐಸಿಯುಗೆ ಅವರನ್ನು ಶಿಫ್ಟ್​ ಮಾಡಲಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.

“ಬೋರಿಸ್​ ಅವರನ್ನು ಆಸ್ಪತ್ರೆಗೆ ಸೇರ್ಪಡೆ ಮಾಡಲಾಗಿದ್ದು ಚಿಕಿತ್ಸೆ ನೀಡಲಾಗುತ್ತಿದೆ. ಸೋಮವಾರ ಮಧ್ಯಾಹ್ನ ಅವರ ಆರೋಗ್ಯ ತೀವ್ರ ಗಂಭೀರವಾಗಿತ್ತು. ಹೀಗಾಗಿ ಆಸ್ಪತ್ರೆ ವೈದ್ಯರು ವಿಶೇಷ ಚಿಕಿತ್ಸೆ ನೀಡುತ್ತಿದ್ದಾರೆ,” ಎಂದು ಪಿಎಂ ಕಚೇರಿ ತಿಳಿಸಿದೆ.

ಈ ನಡುವೆ ಪ್ರಧಾನಿ ನರೇಂದ್ರ ಮೋದಿ ಸಹ ಟ್ವೀಟ್ ಮಾಡಿದ್ದು, ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿರುವ ಬೋರಿಸ್ ಜಾನ್ಸನ್ ಅವರ ಶೀಘ್ರ ಚೇತರಿಕೆಗೆ ಪ್ರಾರ್ಥಿಸಿದ್ದಾರೆ.

ಮಾರಣಾಂತಿಕ ಕೋವಿಡ್-19 ವೈರಸ್ ಅನೇಕ ದೇಶಗಳಲ್ಲಿ ಮರಣಮೃದಂಗವನ್ನು ಬಾರಿಸಿದ್ದು ಜಗತ್ತಿನಾದ್ಯಂತ 13 ಲಕ್ಷಕ್ಕಿಂತ ಹೆಚ್ಚು  ಜನರು ಸೋಂಕಿಗೆ ತುತ್ತಾಗಿದ್ದಾರೆ.  ಮಾತ್ರವಲ್ಲದೆ  74 ಸಾವಿರಕ್ಕಿಂತ ಹೆಚ್ಚು ಜನರು ಬಲಿಯಾಗಿದ್ದಾರೆ.

No Comments

Leave A Comment