Log In
BREAKING NEWS >
ಉಡುಪಿಯಲ್ಲಿ ಜೂ. 1ರಿಂದ ಸಿಟಿ ಬಸ್‌ ಸಂಚಾರ....

ಮೂವರು ಮಕ್ಕಳಿಗೆ ಕೋವಿಡ್-19 ಸೋಂಕು; ರಾಜ್ಯದಲ್ಲಿ 191ಕ್ಕೇರಿದ ಸೋಂಕಿತರ ಸಂಖ್ಯೆ

ಬೆಂಗಳೂರು: ರಾಜ್ಯದಲ್ಲಿ ಕೋವಿಡ್-19 ಸೋಂಕಿತರ ಸಂಖ್ಯೆ ದ್ವಿಶತಕದ ಹತ್ತಿರವಾಗಿದ್ದು, ನಿನ್ನೆಯಿಂದ ಇಂದು ಮಧ್ಯಾಹ್ನದ ವರೆಗೆ ಮತ್ತೆ ಹತ್ತು ಜನರಿಗೆ ಕೋವಿಡ್-19 ಸೋಂಕು ದೃಢವಾಗಿದೆ.

ಬುಧವಾರದ ಅಂತ್ಯಕ್ಕೆ ಸೋಂಕಿತರ ಸಂಖ್ಯೆ 181 ಕ್ಕೆ ಇತ್ತು. ಸದ್ಯ ಗುರುವಾರ ಮಧ್ಯಾಹ್ನ ವೇಳೆಗೆ 10 ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದೆ. ಇದರೊಂದಿಗೆ ರಾಜ್ಯದ ಸೋಂಕಿತರ ಸಂಖ್ಯೆ 191ಕ್ಕೇರಿದೆ.

ಇಂದು ಬಾಗಲಕೋಟೆಯಲ್ಲಿ ಮೂವರಲ್ಲಿ, ಬೆಂಗಳೂರು, ಮೈಸೂರಿನಲ್ಲಿ ತಲಾ ಇಬ್ಬರು, ಚಿಕ್ಕಬಳ್ಳಾಪುರ, ಮಂಡ್ಯ ಹಾಗೂ ಬೆಳಗಾವಿಯಲ್ಲಿ ತಲಾ ಒಬ್ಬರಿಗೆ ಸೋಂಕು ತಗುಲಿರುವುದು ಪರೀಕ್ಷೆಯಿಂದ ಖಚಿತವಾಗಿದೆ.

ಇನ್ನು ಬಾಗಲಕೋಟೆಯಲ್ಲಿ ಮೃತ ವೃದ್ಧನಿಂದ ಸೋಂಕು ತಗುಲಿಸಿಕೊಂಡಿದ್ದ ನೆರೆ ಮನೆಯ ವ್ಯಕ್ತಿಯ ನಾಲ್ಕು ವರ್ಷದ ಮಗ, ಆತನ ಮೈದುನನ 13 ವರ್ಷದ ಮಗ ಹಾಗೂ 9 ವರ್ಷದ ಮಗಳಿಗೂ ಸೋಂಕು ತಗುಲಿದೆ.

ಬೆಳಗಾವಿ, ಮೈಸೂರಿನಲ್ಲಿ ಸೋಂಕಿತರ ತಂದೆಗೆ, ಚಿಕ್ಕಬಳ್ಳಾಪುರದಲ್ಲಿ ಸೋಂಕಿತರ ಸಹೋದರಿಯರಿಗೆ ಸೋಂಕು ತಗುಲಿದೆ.

ಬೆಂಗಳೂರಿನಲ್ಲಿ ನಿಜಾಮುದ್ಧೀನ್ ಧಾರ್ಮಿಕ ಸಮಾವೇಶದಲ್ಲಿ ಭಾಗವಹಿಸಿದ್ದ (ದೆಹಲಿ ಪ್ರಯಾಣ ಹಿನ್ನಲೆ) ಇಬ್ಬರಲ್ಲಿ ಸೋಂಕು ದೃಢಪಟ್ಟಿದೆ.

No Comments

Leave A Comment