Log In
BREAKING NEWS >
ಉಡುಪಿಯಲ್ಲಿ ಜೂ. 1ರಿಂದ ಸಿಟಿ ಬಸ್‌ ಸಂಚಾರ....

ಬಾಲಿವುಡ್ ನಟ ಇರ್ಫಾನ್ ಖಾನ್ ವಿಧಿವಶ: ಕೇಜ್ರಿವಾಲ್ ಸೇರಿದಂತೆ ಗಣ್ಯರ ಸಂತಾಪ

ಮುಂಬಯಿ: ಸೋಂಕಿನಿಂದ ಬಳಲುತ್ತಿದ್ದ ಬಾಲಿವುಡ್ ನಟ ಇರ್ಫಾನ್ ಖಾನ್ ವಿಧಿವಶರಾಗಿದ್ದಾರೆ. ತಮ್ಮ ತಾಯಿಯ ಸಾವಿನ ಬೆನ್ನಲ್ಲೇ ಬಾಲಿವುಡ್ ನಟ ಇರ್ಫಾನ್ ಖಾನ್ ಕೂಡ ತೀವ್ರ ಅನಾರೋಗ್ಯಕ್ಕೆ ತುತ್ತಾಗಿದ್ದು, ಮುಂಬೈನ ಕೋಕಿಲಾಬೆನ್ ಧಿರುಬಾಯಿ ಅಂಬಾನಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.

54 ವರ್ಷದ ಇರ್ಫಾನ್ ಖಾನ್ ಕಳೆದ ಕೆಲ ವರ್ಷಗಳಿಂದ ನ್ಯೂರೋಎಂಡೋಕ್ರೈನ್ ಸಮಸ್ಯೆಯಿಂದ ಬಳಲುತ್ತಿದ್ದರು.  ಇರ್ಫಾನ್ ಖಾನ್ ಆರೋಗ್ಯ ಗಂಭೀರವಾದ ಹಿನ್ನಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ನಟನನ್ನು ತೀವ್ರ ನಿಗಾ ಘಟಕದಲ್ಲಿಟ್ಟು ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಿಸದೇ ಕೊನೆಯುಸಿರೆಳೆದಿದ್ದಾರೆ.

ನನ್ನ ಆತ್ಮೀಯ ಮಿತ್ರ ಇರ್ಫಾನ್ ಖಾನ್ ವಿಧಿವಶರಾಗಿದ್ದು ಈ ನೋವನ್ನು ಭರಿಸುವ ಶಕ್ತಿಯನ್ನು ಅವರ ಕುಟುಂಬಕ್ಕೆ ನೀಡಲಿ ಎಂದು ಸೂಜಿತ್ ಸರ್ಕಾರ್ ಟ್ವೀಟ್ ಮಾಡಿದ್ದಾರೆ.

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಇರ್ಫಾನ್ ಖಾನ್ ನಿಧನಕ್ಕೆ ಸಂತಾಪ ಸೂಚಿಸಿದ್ದು, ಅವರ ನಿಧನ ನಮಗೆ ಆಘಾತವನ್ನುಂಟು ಮಾಡಿದೆ, ಅವರ ಆತ್ಮಕ್ಕೆ ಶಾಂತಿ ದೊರಕಲಿ ಎಂದು ಟ್ವೀಟ್ ಮಾಡಿದ್ದಾರೆ.

No Comments

Leave A Comment