Log In
BREAKING NEWS >
ಉಡುಪಿಯಲ್ಲಿ ಜೂ. 1ರಿಂದ ಸಿಟಿ ಬಸ್‌ ಸಂಚಾರ....

‘ನಿತ್ಯೋತ್ಸವ’ ಹಿರಿಯ ಸಾಹಿತಿ ಕೆಎಸ್ ನಿಸಾರ್ ಅಹಮ್ಮದ್ ವಿಧಿವಶ!

ಬೆಂಗಳೂರು: ನಿತ್ಯೋತ್ಸವ ಕವಿ ಕೆ.ಎಸ್ ನಿಸಾರ್ ಅಹಮ್ಮದ್ ವಿಧಿವಶರಾಗಿದ್ದಾರೆ. ಬೆಂಗಳೂರಿನ ತಮ್ಮ ನಿವಾಸದಲ್ಲಿ ಭಾನುವಾರ ಅಸ್ತಂಗತರಾಗಿದ್ದಾರೆ. ಇತ್ತೀಚೆಗೆ ಅನಾರೋಗ್ಯದಿಂದ ನಿಸಾರ್ ಅಹಮ್ಮದ್ ಅವರು ಆಸ್ಪತ್ರೆಗೆ ದಾಖಲಾಗಿದ್ದರು.

ಕನ್ನಡ ಸಾಹಿತ್ಯ ಲೋಕಕ್ಕೆ ಅಪಾರ ಕೊಡುಗೆ ನೀಡಿದ ಕೆ.ಎಸ್ ನಿರಾಸ್ ಅಹಮ್ಮದ್ ಅವರ ನಿತ್ಯೋತ್ಸವ ಹಾಡು ಸಾಕಷ್ಟು ಪ್ರಸಿದ್ದಿಗಳಿಸಿದ ಹಾಡಾಗಿದೆ. 1935 ಫೆಬ್ರವರಿ 5 ರಂದು ಬೆಂಗಳೂರಿನ ದೇವನಹಳ್ಳಿಯಲ್ಲಿ ಜನಿಸಿದ ಇವರು ಕನ್ನಡ ನಾಡು ನುಡಿಗೆ ಕೊಟ್ಟ ಕೊಡುಗೆ ಅಪಾರ.

1981 ರಾಜ್ಯೋತ್ಸವ ಪ್ರಶಸ್ತಿ , 2008 ರಲ್ಲಿ ಪ್ರದ್ಮಶ್ರೀ ಪ್ರಶಸ್ತಿ ಸೇರಿದಂತೆ ತಮ್ಮ ಸಾಹಿತ್ಯ ಕೃಷಿಗೆ ಸಾಕಷ್ಟು ಪ್ರಶಸ್ತಿಗಳನ್ನು ಪಡೆದುಕೊಂಡಿದ್ದಾರೆ. ಇವರಿಗೆ 84 ವರ್ಷ ವಯಸ್ಸಾಗಿತ್ತು. ಭಾನುವಾರ ಮಧ್ಯಾಹ್ಮ ಬೆಂಗಳೂರಿನ ಪದ್ಮನಾಭ ನಗರದಲ್ಲಿರುವ ತಮ್ಮ ನಿವಾಸದಲ್ಲಿ ನಿಧನರಾಗಿದ್ದಾರೆ.

ಮನದ ಗಾಂಧಿ, ಸಂಜೆ ಐದರ ಮಳೆ, ನಾನೆಂಬ ಪರಕೀಯ, ಅನಾಮಿಕ ಆಂಗ್ಲರು ಇವರ ಪ್ರಮುಖ
ಕಥಾ ಸಂಕಲನವಾಗಿದೆ. ನಿಸಾರ್ ಅಹಮ್ಮದ್ ನಿಧನಕ್ಕೆ ಸಾಹಿತಿಗಳು, ಕವಿಗಳು, ಬರಹಗಾರರು ಸಂತಾಪ ಸೂಚಿಸಿದ್ದಾರೆ.

ಪ್ರೊ. ಕೆ.ಎಸ್.ನಿಸಾರ್ ಅಹಮದ್ ಬೆಂಗಳೂರು ಜಿಲ್ಲೆಯ ದೇವನಹಳ್ಳಿಯಲ್ಲಿ ಫೆಬ್ರುವರಿ 5 1935 ರಲ್ಲಿ ಜನಿಸಿದರು. ಭೂವಿಜ್ಞಾನದಲ್ಲಿ ಸ್ನಾತಕೋತ್ತರ ಪದವಿ ಪಡೆದ ಅವರು ವಿವಿಧ ಸರಕಾರಿ ಕಾಲೇಜುಗಳಲ್ಲಿ ಅಧ್ಯಾಪಕ ಹಾಗು ಪ್ರಾಧ್ಯಾಪಕರಾಗಿ ಕೆಲಸ ಮಾಡಿ ನಿವೃತ್ತರಾದರು.

No Comments

Leave A Comment