Log In
BREAKING NEWS >
ಉಡುಪಿಯಲ್ಲಿ ಜೂ. 1ರಿಂದ ಸಿಟಿ ಬಸ್‌ ಸಂಚಾರ....

ತೆಕ್ಕಟ್ಟೆ : ಕಾರು ಪಲ್ಟಿಯಾಗಿ ಪೊಲೀಸ್ ಸಿಬ್ಬಂದಿಗೆ ಗಾಯ

ತೆಕ್ಕಟ್ಟೆ: ಕಾರ್ಕಳ ದಿಂದ ಬೈಂದೂರು ಕಡೆಗೆ ಸಾಗುತ್ತಿದ್ದ ಕಾರೊಂದು ಚಾಲಕನ ‌ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಪೊಲೀಸ್ ಸಿಬಂದಿಯೊಬ್ಬರು ಗಾಯಗೊಂಡ ಘಟನೆ ಶನಿವಾರ ‌ಮುಂಜಾನೆ ತೆಕ್ಕಟ್ಟೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದೆ.

ಬೈಂದೂರು ಶಿರೂರು ಟೊಲ್ ಗೇಟ್ ನಿಂದ ಕ್ವಾರಂಟೈನ್ ಗಾಗಿ ವ್ಯಕ್ತಿಯೊಬ್ಬರನ್ನು ಕಾರ್ಕಳಕ್ಕೆ ಬಿಟ್ಟು ಹಿಂದಿರುಗುತ್ತಿದ್ದಾಗ ಪೊಲೀಸ್ ಕಾರ್ಯ ನಿರ್ವಹಣೆಯ ಖಾಸಗಿ ವಾಹನ ತೆಕ್ಕಟ್ಟೆ ಸಮೀಪ ಚಾಲಕನ ನಿಯಂತ್ರಣ ಕಳೆದುಕೊಂಡು ಡಿವೈಡರ್ ಏರಿ ಪಲ್ಟಿಯಾಗಿದೆ. ಪರಿಣಾಮ ಪೊಲೀಸ್ ಸಿಬಂದಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ಅವರನ್ನು ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.
ಸ್ಥಳಕ್ಕೆ ಕೋಟ ಪೊಲೀಸರು ಭೇಟಿ ನೀಡಿದ್ದು ಪರಿಶೀಲನೆ ನಡೆಸುತ್ತಿದ್ದಾರೆ.

No Comments

Leave A Comment