ಮಂಗಳೂರಿನಲ್ಲಿ ಬಾರಿ ಮಳೆಗೆ ರಸ್ತೆಯಲ್ಲೇ ನಿಂತ ನೀರು! ವಾಹನ ಸವಾರರ ಪರದಾಟ
ಮಂಗಳೂರು ;ನಗರದಲ್ಲಿ ನಿನ್ನೆಯಿಂದ ಬಾರಿ ಮಳೆಯಾಗುತ್ತಿದ್ದು ನಗರದ ಪ್ರಮುಖ ರಸ್ತೆಗಳಲ್ಲಿ ಮಳೆ ನೀರು ನಿಂತು ವಾಹನ ಸವಾರರು ಪರದಾಡುವಂತಾಗಿದೆ.
ನಿನ್ನೆ ರಾತ್ರಿಯಿಂದ ಜಿಲ್ಲೆಯಾದ್ಯಂತ ಗುಡುಗು ಸಹಿತ ಗಾಳಿ ಮಳೆ ಸುರಿಯುತ್ತಿದ್ದು ನಗರದಲ್ಲಿ ಬತ್ತಿ ಹೋದ ನದಿಗಳಲ್ಲಿ ನೀರು ಹರಿಯಲು ಆರಂಭಿಸಿದೆ.
ಬಂಗಾಲಕೊಲ್ಲಿಯಲ್ಲಿ ವಾಯುಭಾರ ಕುಸಿತ ಮತ್ತು ಅರಬಿ ಸಮುದ್ರದಲ್ಲಿ ನಿಮ್ನ ಒತ್ತಡದ ಪರಿಣಾಮ ಮುಂದಿನ ಎರಡು ದಿನಗಳ ಕಾಲ ಕರಾವಳಿ ಭಾಗದಲ್ಲಿ ಉತ್ತಮ ಮಳೆಯಾಗಲಿದ್ದು, ಭಾರತೀಯ ಹವಾಮಾನ ಇಲಾಖೆ ಕರಾವಳಿ ಭಾಗದಲ್ಲಿ ಮೇ 19ರ ಬೆಳಗ್ಗೆ 8 ಗಂಟೆಯವರೆಗೆ ಯಲ್ಲೋ ಅಲರ್ಟ್ ಘೋಷಣೆ ಮಾಡಿದೆ.