Log In
BREAKING NEWS >
ಉಡುಪಿಯಲ್ಲಿ ಜೂ. 1ರಿಂದ ಸಿಟಿ ಬಸ್‌ ಸಂಚಾರ....

ಬಿಹಾರ: ಟ್ರಕ್ ಬಸ್ಸಿಗೆ ಢಿಕ್ಕಿಯಾಗಿ 9 ವಲಸೆ ಕಾರ್ಮಿಕರು ಸಾವು

ಪಾಟ್ನಾ: ಬಿಹಾರದ ಭಗಲ್ಪುರ ಜಿಲ್ಲೆಯಲ್ಲಿ ಮಂಗಳವಾರ ನಸುಕಿನ ಜಾವ ಟ್ರಕ್ ಬಸ್ಸಿಗೆ ಢಿಕ್ಕಿ ಹೊಡೆದು 9 ಮಂದಿ ವಲಸೆ ಕಾರ್ಮಿಕರು ಮೃತಪಟ್ಟಿದ್ದಾರೆ.

ಖಗರಿಯಾ ಕಡೆ ಹೊರಟಿದ್ದ ಹತ್ತಾರು ವಲಸೆ ಕಾರ್ಮಿಕರನ್ನು ಹೊತ್ತು ಸಾಗುತ್ತಿದ್ದ ಟ್ರಕ್ ನೌಗಾಛಿಯಾ ಹತ್ತಿರ ರಾಷ್ಟ್ರೀಯ ಹೆದ್ದಾರಿ 31ರಲ್ಲಿ ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಬಸ್ ಗೆ ಢಿಕ್ಕಿ ಹೊಡೆದು ಕೆಳಗೆ ಬಿದ್ದು 9 ವಲಸೆ ಕಾರ್ಮಿಕರು ಸ್ಥಳದಲ್ಲಿಯೇ ಮೃತಪಟ್ಟರು.

ಘಟನೆ ಬಗ್ಗೆ ವಿವರ ನೀಡಿದ ಉಪ ಪೊಲೀಸ್ ಮಹಾ ನಿರ್ದೇಶಕ ಸುಜೀತ್ ಕುಮಾರ್, ಸ್ಥಳೀಯ ಪೊಲೀಸರು ಮೃತಪಟ್ಟವರ ಗುರುತು ಪತ್ತೆಹಚ್ಚುತ್ತಿದ್ದಾರೆ. ಇದುವರೆಗೆ 9 ಶವಗಳನ್ನು ಹೊರತೆಗೆಯಲಾಗಿದೆ. ಪ್ರಾಥಮಿಕ ತನಿಖೆ ಪ್ರಕಾರ, ಕಾಟಿಹಾರ್ ಸಮೀಪ ಕಬ್ಬಿಣದ ಸಲಾಕೆ ಹೊತ್ತೊಯ್ಯುತ್ತಿದ್ದ ಟ್ರಕ್ ನಲ್ಲಿ ವಲಸೆ ಕಾರ್ಮಿಕರನ್ನು ಕರೆದೊಯ್ಯಲಾಗಿತ್ತು. ಇನ್ನು ಬೈಕ್ ನಲ್ಲಿ ಸಂಚರಿಸುತ್ತಿದ್ದ ವಲಸೆ ಕಾರ್ಮಿಕರ ಬೈಕ್ ಗಳನ್ನು ಸಹ ಪೊಲೀಸರು ವಶಪಡಿಸಿಕೊಂಡಿದ್ದಾರೆ ಎಂದು ತಿಳಿಸಿದರು.

ಟ್ರಕ್ ನ ಚಾಲಕ ಮತ್ತು ಕ್ಲೀನರ್ ಅಪಘಾತ ಸ್ಥಳದಿಂದ ಪರಾರಿಯಾಗಿದ್ದಾರೆ. ಬಸ್ಸಿನಲ್ಲಿದ್ದ ಕೆಲವು ಪ್ರಯಾಣಿಕರಿಗೆ ಗಾಯಗಳಾಗಿವೆ.

No Comments

Leave A Comment