Log In
BREAKING NEWS >
ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಈ ಬಾರಿ ನಡೆಯ ಬೇಕಾದ ಭಜನಾ ಸಪ್ತಾಹ ಮಹೋತ್ಸವವನ್ನು ಕೋವಿಡ್-19ರ ಕಾರಣದಿ೦ದ ಮು೦ದೂಡಲಾಗಿದ್ದು ಭಜನಾ ಸಪ್ತಾಹ ಮಹೋತ್ಸವವನ್ನು 2021ನೇ ವರುಷದ ಮಾರ್ಚನಲ್ಲಿ ನಡೆಯಲಿದೆ...

ರಾಜ್ಯಸಭೆ ಚುನಾವಣೆ: ಬಿಜೆಪಿಯಿಂದ ತೇಜಸ್ವಿನಿ ಅನಂತ್ ಕುಮಾರ್, ಕಾಂಗ್ರೆಸ್ ನಿಂದ ಖರ್ಗೆ!

ಬೆಂಗಳೂರು: ರಾಜ್ಯಸಭೆ ಚುನಾವಣೆಗೆ ದಿನಾಂಕ ನಿಗಧಿಯಾಗಿದ್ದು ಇನ್ನು ಕೇವಲ 2 ವಾರಗಳು ಮಾತ್ರ ಬಾಕಿಯಿವೆ, ಈ ಹಿನ್ನೆಲೆಯಲ್ಲಿ ಬಿಜೆಪಿಯಿಂದ ತೇಜಸ್ವಿನಿ ಅನಂತ್ ಕುಮಾರ್, ಕಾಂಗ್ರೆಸ್ ನಿಂದ ಖರ್ಗೆ ಹಾಗೂ ಜೆಡಿಎಸ್ ನಿಂದ ದೇವೇಗೌಡರು ಕಣಕ್ಕಿಳಿಯಲಿದ್ದಾರೆ ಎಂದು ಹೇಳಲಾಗುತ್ತಿದೆ.

ಜೂನ್ 19 ರಂದು ರಾಜ್ಯದ 4 ರಾಜ್ಯಸಭೆ ಸ್ಥಾನಗಳಿಗೆ ಚುನಾವಣೆ ನಡೆಯಲಿದೆ.ಜೂನ್ 9 ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದೆ.

ಸದ್ಯ ವಿಧಾನಭೆಯಲ್ಲಿರುವ ಬಲಾಬಲದ ಮೇಲೆ ಬಿಜೆಪಿ 2 ಸ್ಥಾನ ಗೆಲ್ಲಲಿದೆ. ಕಾಂಗ್ರೆಸ್ 1 ಸ್ಥಾನ ಗಳಿಸಲಿದೆ. ಜೆಡಿಎಸ್ ಜೊತೆಗೆ ಕಾಂಗ್ರೆಸ್ ಮೈತ್ರಿ ಮಾಡಿಕೊಂಡಿದ್ದಾದರೇ ಕಾಂಗ್ರೆಸ್ ನಾಲ್ಕನೇ ಸೀಟ್ ಪಡೆಯುವ ಸಾಧ್ಯತೆಯಿದೆ.

ಬಿಜೆಪಿ ಇನ್ನೂ ತನ್ನ ಅಭ್ಯರ್ಥಿ ಯಾರೆಂದು ನಿರ್ಧರಿಸಿಲ್ಲ, ಕಳೆದ  ಲೋಕಸಭೆ ಚುನಾವಣೆಲ್ಲಿ ಟಿಕೆಟ್ ವಂಚಿತವಾಗಿದ್ದ ದಿವಂಗತ ಅನಂತ್ ಕುಮಾರ್ ಅವರ ಪತ್ನಿ ತೇಜಸ್ವಿನಿ ಹೆಸರು ಕೇಳಿ ಬರುತ್ತಿದೆ. ತೇಜಸ್ವಿನಿ ಅವರಿಗೆ ನಾಯಕರು ಮತ್ತು ಕಾರ್ಯಕರ್ತರ ಜೊತೆ ಉತ್ತಮ ಬಾಂಧವ್ಯ ಹೊಂದಿದ್ದಾರೆ. ಸದಾ ಕ್ರಿಯಾಶೀಲವಾಗಿರುವ ಅವರನ್ನು ಮತ್ತಷ್ಟು ಸಕ್ರಿಯಗೊಳಿಸಲು ಅವರನ್ನು ನೇಮಕ ಮಾಡಬೇಕೆಂದು ಕೆಲವರ ಅಭಿಪ್ರಾಯವಾಗಿದೆ ಎಂದು ಮೂಲಗಳು ತಿಳಿಸಿವೆ.

ಇನ್ನೂ ಆರ್ ಎಸ್ ಎಸ್ ಮೂಲದ ಪ್ರಭಾಕರ್ ಕೋರೆ ಅವರನ್ನು ಕಣಕ್ಕಳಿಸಬೇಕೆಂದು ಒತ್ತಡ ಕೇಳಿ ಬರುತ್ತಿದ್ದರೇ, ಬಿಜೆಪಿ ಪ್ರಧಾನ ಕಾರ್ಯದರ್ಶಿ ಮುರುಳೀಧರ್ ರಾವ್ ಅವರು ಕರ್ನಾಟಕದಿಂದ ಆಯ್ಕೆ ಬಯಸಿದ್ದಾರೆ ಎನ್ನಲಾಗಿದೆ,ಆದರೆ ಬಿಜೆಪಿ ಕೋರ್ ಕಮಿಟಿ ಈ ಸಂಬಂಧ ಚರ್ಚಿಸಲು ಇನ್ನೂ ಸಭೆ ಸೇರಬೇಕಿದೆ. ಸಿಎಂ ಯಡಿಯೂರಪ್ಪ ಮತ್ತು ರಾಜ್ಯ ಬಿಜೆಪಿ ಘಟಕದ ಜೊತೆ ಚರ್ಚಿಸಿ ಸಮಿತಿ ಮುಂದಿನ ನಿರ್ಧಾರ ಕೈಗೊಳ್ಳಲಿದೆ.

ಕಾಂಗ್ರೆಸ್-ಜೆಡಿಎಸ್ ಮೈತ್ರಿಯಲ್ಲಿ ದೇವೇಗೌಡರ ಹೆಸರು ಕೇಳಿ ಬರುತ್ತಿದೆ, ಜೆಡಿಎಸ್ ನ 34 ಶಾಸಕರಿದ್ದು, ಅವರಿಗೆ ಕಾಂಗ್ರೆಸ್ ಬೆಂಬಲ ಬೇಕಿದೆ, ಕಾಂಗ್ರೆಸ್ ಜೊತೆಗಿನ ಮೈತ್ರಿಯಿಂದ ದೇವೇಗೌಡರಿಗೆ ಮತ್ತೊಮ್ಮೆ ಸೋಲುಂಟಾಗುವ ಸಾಧ್ಯತೆಯಿದೆ ಎಂದು ಜೆಡಿಎಸ್ ನಾಯಕರು ಸಂಶಯ ವ್ಯಕ್ತಪಡಿಸಿದ್ದಾರೆ.

2019ರ ಲೋಕಸಭೆ ಚುನಾವಣೆಯಲ್ಲಿ ಸೋಲನುಭವಿಸಿದ್ದ ಮಾಜಿ ಸಂಸದ ಮಲ್ಲಿಕಾರ್ಜುನ ಖರ್ಗೆ ಹೆಸರು ಕೂಡ ಕೇಳಿ ಬರುತ್ತಿದೆ. ಆದರೆ ಈ ಸಂಬಂಧ ಪಕ್ಷ ಅಂತಿಮ ನಿರ್ಧಾರ ಕೈಗೊಳ್ಳಬೇಕಿದೆ. ರಾಜ್ಯಸಭೆಗೆ ಅಯ್ಕೆಯಾಗಬೇಕಾದರೆ ಪ್ರತಿ ಅಭ್ಯರ್ಥಿಗೆ 45 ಶಾಸಕರು ಮತ ಹಾಕಬೇಕು,

ಆಡಳಿತಾರೂಢ ಬಿಜೆಪಿ ಮೇಲ್ಮನೆಯಲ್ಲಿ ತನ್ನ ಸದಸ್ಯರ ಸ್ಥಾನ ಹೆಚ್ಚಿಸಿಕೊಳ್ಳುವ ಅವಶ್ಯಕತೆಯಿದೆ. ವಿಧಾನಸಭೆಯಲ್ಲಿ 34 ಸದಸ್ಯರನ್ನು ಹೊಂದಿರುವ ಜೆಡಿಎಸ್, ಅಭ್ಯರ್ಥಿಯನ್ನು ಕಣಕ್ಕಿಳಿಸದೆ ಕಾಂಗ್ರೆಸ್ ಅನ್ನು ಬೆಂಬಲಿಸಬಹುದು ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ.

No Comments

Leave A Comment