Log In
BREAKING NEWS >
ಮುಂಬಯಿಗೆ ಮತ್ತೆ ಮಳೆ ಭೀತಿ : ಮುಂದಿನ ವಾರ ಧಾರಾಕಾರ ಮಳೆ ಸಾಧ್ಯತೆ......ಭಾರಿ ಮಳೆ-ಪ್ರವಾಹ: ಕರ್ನಾಟಕದ ಕನಿಷ್ಟ 100 ರಸ್ತೆಗಳು, ಸೇತುವೆಗಳಿಗೆ ಹಾನಿ!....

ಆರ್ಥಿಕ ಪರಿಸ್ಥಿತಿ ಸುಧಾರಣೆ ಮುಖ್ಯ, ಯಾವುದೇ ಕಾರಣಕ್ಕೆ ಮತ್ತೆ ಲಾಕ್ ಡೌನ್ ಇಲ್ಲ: ಬಿಎಸ್ ವೈ

ಬೆಂಗಳೂರು: ರಾಜ್ಯದ ಆರ್ಥಿಕ ಪರಿಸ್ಥಿತಿ ಸುಧಾರಣೆ ಮುಖ್ಯ. ಹಾಗಾಗಿ ಮತ್ತೆ ಲಾಕ್ ಡೌನ್ ಮಾಡುವ ಪ್ರಶ್ನೆಯೇ ಇಲ್ಲ ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹೇಳಿದರು.

ಬೆಂಗಳೂರಿನ ಶಾಸಕರ ಸಭೆಗೆ ಆಗಮಿಸಿದ ವೇಳೆ ವಿಧಾನಸೌಧದ ಬಳಿ ಮಾತನಾಡಿದ ಅವರು, ಕೋವಿಡ್-19 ನಿಯಂತ್ರಣದಲ್ಲಿ ಬೆಂಗಳೂರು ದೇಶಕ್ಕೆ ಮಾದರಿಯಾಗಿತ್ತು. ಈಗ ನಗರದಲ್ಲಿ ಕೋವಿಡ್-19 ಸೋಂಕಿತರ ಸಂಖ್ಯೆ ಹೆಚ್ಚಾಗುತ್ತದೆ. ಹೀಗಾಗಿ ಬೆಂಗಳೂರಿನ ಸಚಿವರ, ಶಾಸಕರ ಸಭೆ ಕರೆದಿದ್ದೇನೆ. ಇಂದು ಸವಿಸ್ತಾರವಾಗಿ ಚರ್ಚೆ ನಡೆಸಲಾಗುತ್ತದೆ ಎಂದರು.

ಎಲ್ಲಾ ಶಾಸಕರು ತಮ್ಮ ವಿಧಾನಸಭಾ ಕ್ಷೇತ್ರಗಳಲ್ಲಿ ಸೋಂಕು ತಡೆಯಲು ಕ್ರಮ ಕೈಗೊಳ್ಳಬೇಕು. ಹೀಗಾದರೆ ನಿಯಂತ್ರಣ ಸಾಧ್ಯ. ಎಲ್ಲರ ಸಹಕಾರ ಅಗತ್ಯ ಎಂದರು.

ಬೆಂಗಳೂರು ನಗರದಲ್ಲಿ ಸದ್ಯ ಸೋಂಕಿತರ ಸಂಖ್ಯೆ ತೀವ್ರಗತಿಯಲ್ಲಿ ಏರಿಕೆ ಕಾಣುತ್ತಿದೆ. ಗುರುವಾರ ನಗರದಲ್ಲಿ 113 ಮಂದಿಗೆ ಕೋವಿಡ್ ಸೋಂಕು ದೃಢವಾಗಿತ್ತು. ಸದ್ಯ ಬೆಂಗಳೂರು ನಗರ ಜಿಲ್ಲೆ ಸೋಂಕಿತರ ಸಂಖ್ಯೆಯಲ್ಲಿ ರಾಜ್ಯದಲ್ಲಿಯೇ ಮೊದಲ ಸ್ಥಾನದಲ್ಲಿದೆ.

No Comments

Leave A Comment