ಉಡುಪಿ: ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ಕೆ. ರಾಘವೇಂದ್ರ ಕಿಣಿ
ಉಡುಪಿ: ಶಾಸಕ ಕೆ. ರಘುಪತಿ ಭಟ್ ಅವರ ಶಿಫಾರಸ್ಸಿನ ಮೇರೆಗೆ ಕೆ. ರಾಘವೇಂದ್ರ ಕಿಣಿ ಅವರನ್ನು ಮುಖ್ಯಮಂತ್ರಿಯವರು ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷರನ್ನಾಗಿ ನೇಮಿಸಿ ಆದೇಶಿಸಿರುತ್ತಾರೆ.
ನಗರಾಭಿವೃದ್ಧಿ ಪ್ರಾಧಿಕಾರದ ಸದಸ್ಯರುಗಳಾಗಿ ಸುಮಾ ನಾಯ್ಕ, ದಿನಕರ ಪೂಜಾರಿ, ಪ್ರವೀಣ್ ಕುಮಾರ್ ಶೆಟ್ಟಿ ಕಪ್ಪೆಟ್ಟು, ಹಾಗೂ ಕಿಶೋರ್ ಕುಮಾರ್ ಅವರನ್ನು ನೇಮಿಸಲಾಗಿದೆ.