Log In
BREAKING NEWS >
ಮಂಡ್ಯ ಸಂಸದೆ ಸುಮಲತಾ ಅಂಬರೀಶ್‌ಗೂ ಕೊರೊನಾ ಪಾಸಿಟೀವ್‌!...

ಹಿರಿಯ ಸಾಹಿತಿ ಗೀತಾ ನಾಗಭೂಷಣ್ ನಿಧನ

ಹಿರಿಯ ಕನ್ನಡ ಸಾಹಿತಿ ಹಾಗೂ ಕೇಂದ್ರ ಸಾಹಿತ್ಯ ಅಕಾಡೆಮಿ ಪುರಸ್ಕೃತ ಮೊದಲ ಮಹಿಳೆ ಗೀತಾ ನಾಗಭೂಷಣ್ ಅವರು ಹೃದಯಾಘಾತದಿಂದ ನಿಧನರಾದರು.

ಕಲಬುರಗಿ ನಗರದ ಸ್ವಸ್ತಿಕ ನಗರದಲ್ಲಿ ವಾಸವಾಗಿದ್ದ 78 ಗೀತಾ ನಾಗಭೂಷಣ್ ಇವರಿಗೆ ಎದೆ ನೋವು ಕಾಣಿಸಿಕೊಂಡ ಕಾರಣ ಕಲಬುರಗಿ ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ.

1942, ಮಾರ್ಚ್ 25ರಂದು ಕಲಬುರ್ಗಿಯ ಸಾವಳಗಿ ಗ್ರಾಮದಲ್ಲಿ ಜನಸಿದ ಗೀತಾ ನಾಗಭೂಷಣ್ ಅವರು 27 ಕಾದಂಬರಿಗಳನ್ನ ಬರೆದಿದ್ದಾರೆ. ಇವರ ಬದುಕು ಕಾದಂಬರಿಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಲಭಿಸಿದೆ. 50 ಸಣ್ಣ ಕಥೆಗಳು ಮತ್ತು 12 ನಾಟಕ ಕೃತಿಗಳನ್ನೂ ಅವರು ರಚಿಸಿದ್ದಾರೆ.

ಗೀತಾ ನಾಗಭೂಷಣ್ ಅವರು ನಾಡೋಜ ಮತ್ತು ಕೇಂದ್ರ ಸಾಹಿತ್ಯ ಅಕಾಡಮಿ ಪುರಸ್ಕೃತೆಯಾಗಿದ್ದರು. 2010 ರಲ್ಲಿ ಗದಗ ನಗರದಲ್ಲಿ ನಡೆದ ಅಖಿಲ ಭಾರತ ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆ ವಹಿಸಿದ್ದ ಅವರು ನಾಡೊಜ ಪ್ರಶಸ್ತಿ ಪಡೆದ ಮೊದಲ ಮಹಿಳಾ ಸಾಹಿತಿಯಾಗಿದ್ದಾರೆ.

ಹಾಗೆಯೇ ಅವರು ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪಡೆದ ಕರ್ನಾಟಕದ ಮೊದಲ ಮಹಿಳಾ ಸಾಹಿತಿ ಕೂಡಾ ಹೌದು. ಹಾಗೆಯೇ ಕರ್ನಾಟಕ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾದ ಮೊದಲ ಮಹಿಳಾ ಸಾಹಿತಿ ಎಂಬ ಹೆಗ್ಗಳಿಕೆಯನ್ನು ಇವರು ಪಡೆದಿದ್ದಾರೆ.

No Comments

Leave A Comment