Log In
BREAKING NEWS >
ಮಂಡ್ಯ ಸಂಸದೆ ಸುಮಲತಾ ಅಂಬರೀಶ್‌ಗೂ ಕೊರೊನಾ ಪಾಸಿಟೀವ್‌!...

ಜಮ್ಮು-ಕಾಶ್ಮೀರದ ಅನಂತ್ ನಾಗ್ ಜಿಲ್ಲೆಯಲ್ಲಿ ಎನ್ ಕೌಂಟರ್:ಮೂವರು ಉಗ್ರರ ಹತ್ಯೆ

ಅನಂತ್ ನಾಗ್: ಜಮ್ಮು-ಕಾಶ್ಮೀರದ ಅನಂತ್ ನಾಗ್ ಜಿಲ್ಲೆಯ ಖುಲ್ಚೊಹರ್ ಪ್ರದೇಶದಲ್ಲಿ ಸೋಮವಾರ ನಸುಕಿನ ಜಾವ ನಡೆದ ಎನ್ ಕೌಂಟರ್ ನಲ್ಲಿ ಮೂವರು ಉಗ್ರರು ಹತ್ಯೆಯಾಗಿದ್ದಾರೆ.

ಅವರ ಗುರುತುಗಳನ್ನು ಪತ್ತೆಹಚ್ಚಲಾಗಿದೆ. ಶೋಧ ಕಾರ್ಯ ಮುಂದುವರಿದಿದೆ ಎಂದು ಕಾಶ್ಮೀರ ವಲಯ ಪೊಲೀಸರು ತಿಳಿಸಿದ್ದಾರೆ.
ಮೊನ್ನೆ 26ರಂದು ಟ್ರಾಲ್ ಪ್ರದೇಶದಲ್ಲಿ ನಡೆದ ಎನ್ ಕೌಂಟರ್ ನಲ್ಲಿ ಸಹ ಮೂವರು ಉಗ್ರರನ್ನು ಹತ್ಯೆಗೈಯುವಲ್ಲಿ ಪೊಲೀಸರು ಯಶಸ್ವಿಯಾಗಿದ್ದರು.

ನಿನ್ನೆ ಸಾಯಂಕಾಲ ಅನಂತ್ ನಾಗ್ ಜಿಲ್ಲೆಯ ಚೆವಾ ಉಲ್ಲಾರ್ ಗ್ರಾಮದಲ್ಲಿ ಉಗ್ರರ ಇರುವಿಕೆ ಬಗ್ಗೆ ಜಮ್ಮು-ಕಾಶ್ಮೀರ ಪೊಲೀಸರಿಂದ ಮಾಹಿತಿ ಪಡೆದ ಭದ್ರತಾ ಪಡೆ ಪೊಲೀಸರು ಶೋಧ ಕಾರ್ಯ ನಡೆಸುವಾಗ ಉಗ್ರರ ಇರುವಿಕೆ ಬಗ್ಗೆ ಖಚಿತ ಮಾಹಿತಿ ಸಿಕ್ಕಿತು. ನಂತರ ಎನ್ ಕೌಂಟರ್ ನಡೆಯಿತು.

No Comments

Leave A Comment