Log In
BREAKING NEWS >
ಉಡುಪಿ ನಗರಸಭೆ ಅಧ್ಯಕ್ಷರಾಗಿ ಸುಮಿತ್ರಾ ನಾಯಕ್ ಹಾಗೂ ಉಪಾಧ್ಯಕ್ಷರಾಗಿ ಲಕ್ಷ್ಮಿ ‌ಮಂಜುನಾಥ್ ಕೊಳ ಆಯ್ಕೆ....

ಜಾರ್ಖಂಡ್: ಮೊಬೈಲ್ ಕೊಡಿಸಲು ತಂದೆ ನಿರಾಕರಿಸಿದ್ದಕ್ಕೆ 13 ವರ್ಷದ ಮಗ ಆತ್ಮಹತ್ಯೆ

ರಾಂಚಿ: ತಂದೆ ಮೊಬೈಲ್ ಫೋನ್ ಕೊಡಿಸಲು ನಿರಾಕರಿಸಿದ್ದಕ್ಕೆ 13 ವರ್ಷದ ಮಗ ಮಾತ್ರೆ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಜಾರ್ಖಂಡ್ ನ ಗುಮ್ಲಾ ಜಿಲ್ಲೆಯಲ್ಲಿ ಬುಧವಾರ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಜಯಮಂಗಲ್ ಖರಿಯಾ ಠಾಣೆಯ ಸಹಾಯಕ ಸಬ್ ಇನ್ಸ್ ಪೆಕ್ಟರ್ ಪುತ್ರ ಅಲೋಕ್ ಮಾತ್ರೆಗಳನ್ನು ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಗುಮ್ಲಾ ಜಿಲ್ಲೆಯ ಸದರ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿರುವ ದುಮಾರ್ದಿಯಾ ಜಾರಿಯಾ ಟೋಲಿ ಗ್ರಾಮದಲ್ಲಿ ಈ ಘಟನೆ ನಡೆದಿದೆ.

ಅಲೋಕ್ ಏಳನೆ ತರಗತಿ ವಿದ್ಯಾರ್ಥಿಯಾಗಿದ್ದು, ಕಳೆದ ಮೂರು ದಿನಗಳಿಂದ ಆಂಡ್ರಾಯ್ಡ್ ಮೊಬೈಲ್ ಫೋನ್ ಕೊಡಿಸುವಂತೆ ತಂದೆಗೆ ಒತ್ತಾಯಿಸುತ್ತಿದ್ದನು. ಆದರೆ ತಂದೆ ಮೊಬೈಲ್ ಈಗ ದುಬಾರಿಯಾಗಿವೆ. ಸ್ವಲ್ಪ ದಿನ ಕಾಯಿ ಎಂದು ಹೇಳಿದ್ದರು. ಇದರಿಂದ ತೀವ್ರ ಬೇಸರಗೊಂಡ ಬಾಲಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

No Comments

Leave A Comment