Log In
BREAKING NEWS >
ಶಾಸಕ ಅಖಂಡ ಶ್ರೀನಿವಾಸಮೂರ್ತಿ ಮನೆ ಮೇಲೆ ದಾಳಿ; ಮುಖ್ಯ ಆರೋಪಿ ನವೀನ್ ಸೇರಿದಂತೆ 110 ಮಂದಿ ಬಂಧನ...

ಮಂಗಳೂರಿನಲ್ಲಿ ಕೋವಿಡ್-19 ಸೋಂಕಿಗೆ 31 ವರ್ಷದ ಯುವಕ ಸೇರಿ ಇಬ್ಬರು ಬಲಿ

ಮಂಗಳೂರು: ಕೋವಿಡ್-19 ಸೋಂಕಿಗೆ ಜಿಲ್ಲೆಯಲ್ಲಿ ಮತ್ತಿಬ್ಬರು ಬಲಿಯಾಗಿದ್ದಾರೆ. 31 ವರ್ಷದ ಯುವಕ ಮತ್ತು 78 ವರ್ಷದ ವ್ಯಕ್ತಿ ಕೋವಿಡ್-19 ಸೋಂಕಿಗೆ ತುತ್ತಾಗಿ ಇಂದು ಕೊನೆಯುಸಿರೆಳಿದಿದ್ದಾರೆ.

ಮಂಗಳೂರಿನ ಬೆಂಗ್ರೆ ನಿವಾಸಿಯಾಗಿರುವ 78 ವರ್ಷದ ಪುರುಷ ಮಧುಮೇಹ ಮತ್ತು ನ್ಯುಮೋನಿಯಾ ರೋಗದಿಂದ ಬಳಲುತ್ತಿದ್ದ. ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವ್ಯಕ್ತಿಗೆ ಕೋವಿಡ್ ಸೋಂಕು ದೃಢವಾಗಿದ್ದು, ಇಂದು ಮುಂಜಾನೆ ಮೃತಪಟ್ಟಿದ್ದಾರೆ.

ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ಮೂಲದ 31 ವರ್ಷದ ಯುವಕ ಮಂಗಳೂರಿನ ಆಸ್ಪತ್ರೆಯಲ್ಲಿ ಕೋವಿಡ್ ಸೋಂಕಿಗೆ ಬಲಿಯಾಗಿದ್ದಾನೆ. ಅಧಿಕ ರಕ್ತದೊತ್ತಡದಿಂದ ಬಳಲುತ್ತಿದ್ದ ಯುವಕ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ. ಆದರೆ ಯುವಕ ಮೃತಪಟ್ಟಿದ್ದು, ಮರಣದ ನಂತರ ಕೋವಿಡ್-19 ಪರೀಕ್ಷೆ ಮಾಡಿಸಲಾಗಿದ್ದು, ಪಾಸಿಟಿವ್ ವರದಿ ಬಂದಿದೆ.

ಈ ಎರಡು ಮರಣ ಪ್ರಕರಣಗಳಿಂದ ಜಿಲ್ಲೆಯ ಒಟ್ಟು ಸೋಂಕಿತರ ಸಂಖ್ಯೆ 16 ಕ್ಕೇರಿದೆ. ಇವರಲ್ಲಿ 14 ಮಂದಿ ಕೋವಿಡ್-19 ಸೋಂಕಿನ ಕಾರಣದಿಂದ ಮರಣ ಹೊಂದಿದ್ದರೆ, ಇಬ್ಬರು ಕೋವಿಡ್ ಅಲ್ಲದ ಅನ್ಯ ಕಾರಣದಿಂದ ಸಾವನ್ನಪ್ಪಿದ್ದಾರೆ.

No Comments

Leave A Comment