Log In
BREAKING NEWS >
ಮುಂಬಯಿಗೆ ಮತ್ತೆ ಮಳೆ ಭೀತಿ : ಮುಂದಿನ ವಾರ ಧಾರಾಕಾರ ಮಳೆ ಸಾಧ್ಯತೆ......ಭಾರಿ ಮಳೆ-ಪ್ರವಾಹ: ಕರ್ನಾಟಕದ ಕನಿಷ್ಟ 100 ರಸ್ತೆಗಳು, ಸೇತುವೆಗಳಿಗೆ ಹಾನಿ!....

ಕೆಪಿಸಿಸಿ ಅಧ್ಯಕ್ಷರಾಗಿ ಡಿ.ಕೆ. ಶಿವಕುಮಾರ್ ಅಧಿಕಾರ ಸ್ವೀಕಾರ; ಒಗ್ಗಟ್ಟಿನ ಮಂತ್ರ ಘೋಷಣೆ

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷರಾಗಿ ಡಿ.ಕೆ.ಶಿವಕುಮಾರ್ ‘ಪ್ರತಿಜ್ಞಾ ದಿನ’ ವಿಶೇಷ ಕಾರ್ಯಕ್ರಮದ ಮೂಲಕ ಪದಗ್ರಹಣ ಸ್ವೀಕರಿಸಿದರು.

ನಿಕಟಪೂರ್ವ ಅಧ್ಯಕ್ಷ ದಿನೇಶ್ ಗುಂಡೂರಾವ್ ಕಾಂಗ್ರೆಸ್ ಧ್ವಜವನ್ನು ಶಿವಕುಮಾರ್ ಗೆ ಹಸ್ತಾಂತರ ಮಾಡಿದರು. ಕಾರ್ಯಾದ್ಯಕ್ಷರಾದ ಈಶ್ವರ್ ಖಂಡ್ರೆ, ಸತೀಶ್ ಜಾರಕಿಹೊಳಿ ಹಾಗೂ ಸಲೀಂ ಅಹಮದ್ ಸಹ ಪದಗ್ರಹಣ ಮಾಡಿದರು.

ಇದೇ ವೇಳೆ ರಾಜ್ಯದ ಗ್ರಾಮ ಪಂಚಾಯ್ತಿ, ನಗರ ಸಭೆ ಹಾಗೂ ಪುರಸಭೆ ಸೇರಿದಂತೆ ಸುಮಾರು 10 ಸಾವಿರಕ್ಕೂ ಅಧಿಕ ಸ್ಥಳಗಳಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ಕಾಂಗ್ರೆಸ್ ಕಾರ್ಯಕರ್ತರು, ವಿಡಿಯೋ ಕಾನ್ಫರೆನ್ಸ್ ಮೂಲಕ ಪ್ರತಿಜ್ಞಾ ದಿನ ಕಾರ್ಯಕ್ರಮದಲ್ಲಿ ಭಾಗಿ, ಪ್ರತಿಜ್ಞೆ ಸ್ವೀಕರಿಸಿದರು.

ಪ್ರತಿಜ್ಞಾ ವಿಧಿ ಕಾರ್ಯಕ್ರಮವನ್ನು ರಾಜ್ಯ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಜ್ಯೋತಿ ಬೆಳಗಿಸುವ ಮೂಲಕ ಉದ್ಘಾಟನೆ ನೆರವೇರಿಸಿದರು. ಸಂಗೀತ ನಿರ್ದೇಶಕ ಸಾಧುಕೋಕಿಲ ಸಂಗೀತ ಸುಧೆಯೊಂದಿಗೆ ಜ್ಯೋತಿ ಬೆಳಗಿ ಕಾರ್ಯಕ್ರಮಕ್ಕೆ ರಂಗು ತಂದಿತು. ಕೆಪಿಸಿಸಿ ಅಧ್ಯಕ್ಷರ ಪ್ರಮಾಣ ವಚನ ಕಾರ್ಯಕ್ರಮದ ಆರಂಭದಲ್ಲಿ ಹುತಾತ್ಮ ಯೋಧರಿಗೆ ಗೌರವ ನಮನ ಸಲ್ಲಿಸಲಾಯಿತು.

ಸೇವಾದಳ ಘಟಕದಿಂದ ವಂದೇ ಮಾತರಂ ಗೀತೆ ಮೊಳಗಿದ್ದು, ಕೆಪಿಸಿಸಿ ವಿವಿಧ ಘಟಕಗಳು, ಮುಖಂಡರಿಂದ ಜ್ಯೋತಿ ಬೆಳಗಿಸಲಾಯಿತು. ವೇದಿಕೆಯಲ್ಲಿ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ, ರಾಜ್ಯಸಭಾ ಸದಸ್ಯ ಮಲ್ಲಿಕಾರ್ಜುನ ಖರ್ಗೆ ವಿಧಾನಪರಿಷತ್ ವಿಪಕ್ಷ ನಾಯಕ ಎಸ್.ಆರ್.ಪಾಟೀಲ್, ರಹ್ಮಾನ್ ಖಾನ್ ಮತ್ತಿತರರು ಉಪಸ್ಥಿತರಿದ್ದರು.

ಉದ್ಘಾಟನಾ ಭಾಷಣದಲ್ಲಿ ಪದಗ್ರಹಣ ಕಾರ್ಯಕ್ರಮ ಕುರಿತು ಎಐಸಿಸಿ ಅಧಿನಾಯಕಿ ಸೋನಿಯಾ ಗಾಂಧಿ ಸಂದೇಶವನ್ನು ವೇಣುಗೋಪಾಲ್ ವಾಚಿಸಿದರು. “ಎನ್ ಎಸ್ ಯು ಐ ನಿಂದಲೂ ನಾನು ಡಿಕೆ ಶಿವಕುಮಾರ್ ರನ್ನುಬಲ್ಲೆ. ತಳ ಮಟ್ಟದಿಂದ ಬೆಳೆದು ಬಂದು ಇಂದು ಈ ಮಟ್ಟಕ್ಕೇರಿದ್ದಾರೆ. ಸವಾಲುಗಳು ಅವಕಾಶಗಳನ್ನು ಸೃಷ್ಟಿ ಮಾಡುತ್ತವೆ. ಅಂತಹ ಅವಕಾಶಗಳನ್ನು ಶಿವಕುಮಾರ್ ಚೆನ್ನಾಗಿ ಬಳಸಿಕೊಂಡಿದ್ದಾರೆ. ಇಂದು ಬಂಡೆ ತರಹ ಸವಾಲುಗಳನ್ನೆಲ್ಲ ಗೆದ್ದು ನಮ್ಮ ಮುಂದೆ ನಿಂತಿದ್ದಾರೆ ಎಂದರು.
ಗುಜರಾತ್ ಕಾಂಗ್ರೆಸ್ ಶಾಸಕರ ರಕ್ಷಣೆ ವಿಚಾರದಲ್ಲಿ ಡಿ.ಕೆ ಶಿವಕುಮಾರ್ ನಿರ್ವಹಿಸಿದ ಸೇವೆ ಎದುರಿಸಿದ್ದ ಸಂಕಷ್ಟಗಳನ್ನು ವೇಣುಗೋಪಾಲ್ ಭಾಷಣದಲ್ಲಿ ಸ್ಮರಿಸಿದರು.

ಕರ್ನಾಟಕದಲ್ಲಿ ಪಕ್ಷಕ್ಕೆ ಒಳ್ಳೆಯ ತಳಹದಿ ಇದೆ. ಒಳ್ಳೆಯ ಪಥದಲ್ಲಿ ಡಿ.ಕೆ.ಶಿವಕುಮಾರ್ ಪಕ್ಷವನ್ನು ಮುನ್ನಡೆಸಿಕೊಂಡು ಹೋಗಲಿದ್ದಾರೆ. ಕೋವಿಡ್ 19, ಆರ್ಥಿಕ ಪರಿಸ್ಥಿತಿಯ ಸಂಕಷ್ಟದ ನಡುವೆ ರಾಷ್ಟ್ರದ ಜನ ತೊಂದರೆಗೆ ಒಳಗಾಗಿದ್ದಾರೆ. ಇಂತಹ ಸಂದರ್ಭದಲ್ಲಿ ಸಾಮಾಜಿಕ ಅಂತರ ಕಾಯ್ದುಕೊಂಡು ಕಾರ್ಯಕ್ರಮ ಆಯೋಜಿಸಿರುವ ಡಿಕೆ ಶಿವಕುಮಾರ್ ರನ್ನು ಅಭಿನಂದಿಸುವುದಾಗಿ ವೇಣುಗೋಪಾಲ್ ಹೇಳಿದರು.

ಕಾಯಕವೇ ಕೈಲಾಸ: ಕೆಪಿಸಿಸಿ ನೂತನ ಅಧ್ಯಕ್ಷರಾಗಿ ಡಿಕೆ ಶಿವಕುಮಾರ್ ಪದಗ್ರಹಣ ಕಾರ್ಯಕ್ರಮ ಪರ್ಕಳ ಕಾರ್ಯಕರ್ತರಲ್ಲಿ ಹರ್ಷೋತ್ಸವ…

ಉಡುಪಿ ಇಲ್ಲಿನ ಪರ್ಕಳದ ಕಾಂಗ್ರೆಸ್ ಕಚೇರಿಯಲ್ಲಿ ಕೆಪಿಸಿಸಿ ನೂತನ ಅಧ್ಯಕ್ಷರಾಗಿ ಸಾರಥ್ಯ ವಹಿಸಿರುವ ಸನ್ಮಾನ್ಯ ಡಿ ಕೆ ಶಿವಕುಮಾರ್ ರವರ ಪದಗ್ರಹಣ ಕಾರ್ಯಕ್ರಮವನ್ನು ಉಡುಪಿಯ ಮಾಜಿ ಶಾಸಕ ಯು ಆರ್ ಸಭಾಪತಿ ದೀಪ ಬೆಳಗಿಸಿ ಉದ್ಘಾಟಿಸುವ ಮೂಲಕ ಚಾಲನೆ ಕೊಟ್ಟರು ಈ ಸಂದರ್ಭದಲ್ಲಿ ಪರ್ಕಳದ ಕಾಂಗ್ರೆಸ್ ಮುಖಂಡ ಮೋಹನ್ ದಾಸ್ ನಾಯಕರವರು ಡಿಕೆಶಿ ಯವರ ಭಾವಚಿತ್ರಕ್ಕೆ ಹಾಲೆರೆದು ಸರ್ವ ಕಾರ್ಯಕರ್ತರು ಜೊತೆಗೂಡಿ ತೆಂಗಿನಕಾಯಿ ಒಡೆದು ಶುಭಕೋರಿ ಜೈಕಾರ ಹಾಕುತ್ತಾ ಸಿಹಿತಿಂಡಿ ನೀಡಿ ಸಂಭ್ರಮಿಸಿದರು.

ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡ ಜಯಶೆಟ್ಟಿ ಬನ್ನಂಜೆ. ಗಣೇಶ್ ರಾಜ್ ಸರಳೇಬೆಟ್ಟು. ಅನಂತ್ ನಾಯ್ಕ್ ಸರಳಬೆಟ್ಟು. ಶ್ರೀಮತಿ ದೇವಕಿ ಪೂಜಾರಿ ನೆಹರು ನಗರ.  ಬಾಲಕೃಷ್ಣ ಶೆಟ್ಟಿ ಬನ್ನಂಜೆ. ರಾಜೇಶ್ ಪ್ರಭು ಪರ್ಕಳ, ಉಪೇಂದ್ರ ನಾಯ್ಕ್ ತುಳಜಾ. ಪರ್ಕಳ. ಸದಾನಂದ ಪೂಜಾರಿ ಪರ್ಕಳ, ಸುಜಿತ್ ಶೆಟ್ಟಿಗಾರ್ ಪರ್ಕಳ. ವಾಲ್ಟರ್ ಡಿಸೋಜ ಕೊಳಲಗಿರಿ, ಉಮೇಶ್ ಮಣಿಪಾಲ್. ರವಿ ಪೂಜಾರಿ ಬೊಳಜೆ, ಪ್ರಕಾಶ್ ನಾಯ್ಕ್.ಪಿ.ನಾರಾಯಣ ಗ್ಯಾಟ್ಸನ್ ಮೊದಲಾದವರು ಜೊತೆಗಿದ್ದು ಕಾರ್ಯಕ್ರಮ ಜರಗಿತು.

ಕಾಂಗ್ರೆಸ್ ಪ್ರತಿಜ್ಞೆ ಬೋಧನೆ ಬಳಿಕ ಮಾತನಾಡಿದ ಡಿ.ಕೆ.ಶಿವಕುಮಾರ್, ತಮಗೆ ಜಾತಿ, ಮತ, ಧರ್ಮದಲ್ಲಿ ನಂಬಿಕೆ ಇಲ್ಲ. ನನಗೆ ಕಾಂಗ್ರೆಸ್ ಪಕ್ಷವೇ ಧರ್ಮ, ಕಾಂಗ್ರೆಸ್ ಪಕ್ಷವೇ ಜಾತಿ, ಕಾಂಗ್ರೆಸ್ ಗುಂಪಿನ ಮೇಲೆ ಮಾತ್ರ ನಂಬಿಕೆ ಇದೆ. ವ್ಯಕ್ತಿ ಪೂಜೆ ಬಿಟ್ಟು ಪಕ್ಷ ಪೂಜೆ ಮಾಡೋಣ, ನಮಗೆ ಯಾವುದೇ ಹಿಂಬಾಲಕರು ಬೇಡ. ಪಕ್ಷವನ್ನು ಸಮೂಹ ನೆಲೆಯಿಂದ ಕೇಡರ್ ಆಧಾರಿತ ಪಕ್ಷವನ್ನಾಗಿ ಮಾಡೋಣ ಎಂದು ಹೇಳಿದರು.

No Comments

Leave A Comment