Log In
BREAKING NEWS >
ಮುಂಬಯಿಗೆ ಮತ್ತೆ ಮಳೆ ಭೀತಿ : ಮುಂದಿನ ವಾರ ಧಾರಾಕಾರ ಮಳೆ ಸಾಧ್ಯತೆ......ಭಾರಿ ಮಳೆ-ಪ್ರವಾಹ: ಕರ್ನಾಟಕದ ಕನಿಷ್ಟ 100 ರಸ್ತೆಗಳು, ಸೇತುವೆಗಳಿಗೆ ಹಾನಿ!....

ಮಂಡ್ಯ ಸಂಸದೆ ಸುಮಲತಾ ಅಂಬರೀಶ್‌ಗೂ ಕೊರೊನಾ ಪಾಸಿಟೀವ್‌!

ಮಂಡ್ಯ: ಕೊರೊನಾ ಸೋಂಕು ಸರ್ವವ್ಯಾಪಿಯಾಗಿ ಆವರಿಸುತ್ತದೆ. ಇದೀಗ ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಅವರಿಗೂ ಕೊರೊನಾ ಸೋಂಕು ತಗುಲಿದೆ. ಈ ಕುರಿತು ಸ್ವತಃ ಸುಮಲತಾ ಅಂಬರೀಶ್‌ ಅವರೇ ಹೇಳಿಕೊಂಡಿದ್ದಾರೆ.

ಕಳೆದ ಜುಲೈ 4ರ ಶನಿವಾರದಂದು ನನಗೆ ಸ್ವಲ್ಪ ತಲೆನೋವು ಮತ್ತು ಗಂಟಲು ನೋವು ಕಾಣಿಸಿಕೊಂಡಿತ್ತು. ನಿರಂತರವಾಗಿ ನನ್ನ ಕ್ಷೇತ್ರದ ಕಾರ್ಯಗಳಲ್ಲಿ ತೊಡಗಿದ್ದರಿಂದ ಮತ್ತು ಕೊರೊನಾ ಪೀಡಿತ ಪ್ರದೇಶಗಳಿಗೂ ಭೇಟಿ ಕೊಟ್ಟಿದ್ದರಿಂದ, ಕೋವಿಡ್ 19 ಪರೀಕ್ಷೆಗೆ ಒಳಗಾದೆ. ಇಂದು ಪಾಸಿಟಿವ್ ಎಂದು ಫಲಿತಾಂಶ ಬಂದಿದೆ. ಹಾಗಾಗಿ ವೈದ್ಯರ ಸಲಹೆ ಪಡೆದುಕೊಂಡು ಅಗತ್ಯ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದೇನೆ. ಮನೆಯಲ್ಲಿಯೇ ಕ್ವಾರಂಟೈನ್ ಗೆ ಒಳಪಟ್ಟಿದ್ದೀನಿ ಎಂದು ಸುಮಲತಾ ಅವರು ತಿಳಿಸಿದ್ದಾರೆ.

No Comments

Leave A Comment