Log In
BREAKING NEWS >
ಮುಂಬಯಿಗೆ ಮತ್ತೆ ಮಳೆ ಭೀತಿ : ಮುಂದಿನ ವಾರ ಧಾರಾಕಾರ ಮಳೆ ಸಾಧ್ಯತೆ......ಭಾರಿ ಮಳೆ-ಪ್ರವಾಹ: ಕರ್ನಾಟಕದ ಕನಿಷ್ಟ 100 ರಸ್ತೆಗಳು, ಸೇತುವೆಗಳಿಗೆ ಹಾನಿ!....

ಶುಕ್ರವಾರ ರಾಜ್ಯದಲ್ಲಿ ಕೊರೋನಾಗೆ 57 ಬಲಿ, ಬೆಂಗಳೂರಿನಲ್ಲಿ 1447 ಸೇರಿ 2313 ಮಂದಿಗೆ ಪಾಸಿಟಿವ್

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ವೈರಸ್ ಮರಣ ಮೃದಂಗ ಮುಂದುವರೆದಿದ್ದು, ಶುಕ್ರವಾರ ಒಂದೇ ದಿನ ಬರೋಬ್ಬರಿ 57 ಮಂದಿ ಮಹಾಮಾರಿಗೆ ಬಲಿಯಾಗಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 543ಕ್ಕೇರಿಕೆಯಾಗಿದೆ.

ಕೊರೋನಾ ವೈರಸ್ ನಿಂದಾಗಿ ಕಳೆದ 24 ಗಂಟೆಯಲ್ಲಿ ಬೆಂಗಳೂರಿನಲ್ಲಿ 28 ಸೋಂಕಿತರು ಸೇರಿದಂತೆ ರಾಜ್ಯದಲ್ಲಿ ಒಟ್ಟು 57 ಮಂದಿ ಸಾವನ್ನಪ್ಪಿದ್ದಾರೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಕೆ ಸುಧಾಕರ್ ಅವರು ತಿಳಿಸಿದ್ದಾರೆ.

ಇಂದು ಬೆಂಗಳೂರು ನಗರವೊಂದರಲ್ಲೆ ಅತಿ ಹೆಚ್ಚು ಅಂದರೆ 1447 ಪ್ರಕರಣಗಳು ಸೇರಿದಂತೆ ರಾಜ್ಯದಲ್ಲಿ ಒಟ್ಟು 2313 ಮಂದಿಗೆ ಪಾಸಿಟಿವ್ ದೃಢಪಟ್ಟಿದೆ. ಇದರಿಂದ ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 33,418ಕ್ಕೇರಿಕೆಯಾಗಿದೆ ಎಂದು ಸಚಿವರು ಹೇಳಿದ್ದಾರೆ.

ಇನ್ನು ರಾಜ್ಯದಲ್ಲಿ ಚೇತರಿಕೆಯ ಪ್ರಮಾಣ ಕೂಡ ಉತ್ತಮವಾಗಿದ್ದು, ಶುಕ್ರವಾರ ಒಂದೇ ದಿನ 1003 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. 472 ಸೋಂಕಿತರು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಬೆಂಗಳೂರು ನಗರದಲ್ಲಿ ಬರೋಬ್ಬರಿ 1447 ಪ್ರಕರಣಗಳು ವರದಿಯಾಗಿವೆ. ಇದರಿಂದ ನಗರದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 15329ಕ್ಕೇರಿಕೆಯಾಗಿದೆ.

ದಕ್ಷಿಣ ಕನ್ನಡದ 139, ವಿಜಯಪುರದಲ್ಲಿ 89, ಬಳ್ಳಾರಿಯಲ್ಲಿ 66, ಕಲಬುರಗಿಯಲ್ಲಿ 58, ಯಾದಗಿರಿ, ಮೈಸೂರಿನಲ್ಲಿ 51, ಧಾರವಾಡದಲ್ಲಿ 50, ಹಾವೇರಿಯಲ್ಲಿ 42, ಉಡುಪಿಯಲ್ಲಿ 34, ಉತ್ತರಕನ್ನಡ, ಕೊಡುಗಿನಲ್ಲಿ ತಲಾ 33, ಮಂಡ್ಯದಲ್ಲಿ 31 ಪ್ರಕರಣಗಳು ವರದಿಯಾಗಿವೆ.

ರಾಯಚೂರಿನಲ್ಲಿ 25, ರಾಮನಗರದಲ್ಲಿ 23, ದಾವಣಗೆರೆಯಲ್ಲಿ 21, ಬೀದರ್‌ನಲ್ಲಿ 19, ಗದಗದಲ್ಲಿ 19, ಬೆಳಗಾವಿಯಲ್ಲಿ 15, ಚಿಕ್ಕಬಳ್ಳಾಪುರದಲ್ಲಿ 12, ತುಮಕೂರಿನಲ್ಲಿ 10, ಕೋಲಾರ, ಚಾಮರಾಜನಗರದಲ್ಲಿ ತಲಾ 9, ಕೊಪ್ಪಳದಲ್ಲಿ 7, ಹಾಸನ, ಶಿವಮೊಗ್ಗ, ಬಾಗಲಕೋಟೆಯಲ್ಲಿ ತಲಾ 6, ಬೆಂಗಳೂರು ಗ್ರಾಮಾಂತರ, ಚಿಕ್ಕಮಗಳೂರಿನಲ್ಲಿ ತಲಾ 1 ಪ್ರಕರಣ ವರದಿಯಾಗಿವೆ.

ಇಂದು ಬೆಂಗಳೂರಿನಲ್ಲಿ 28 ಮಂದಿ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಐವರು, ಗದಗದಲ್ಲಿ ಇಬ್ಬರು, ಬಳ್ಳಾರಿಯಲ್ಲಿ ಒಬ್ಬರು, ಮೈಸೂರಿನಲ್ಲಿ ಮೂವರು, ಬೀದರ್‌ನಲ್ಲಿ ಮೂವರು, ಚಿಕ್ಕಮಗಳೂರಿನಲ್ಲಿ ಒಬ್ಬರು, ಕಲಬುರಗಿಯಲ್ಲಿ ಇಬ್ಬರು, ಧಾರವಾಡದಲ್ಲಿ ಇಬ್ಬರು, ರಾಯಚೂರಿನಲ್ಲಿ ಒಬ್ಬರು ಹಾಗೂ ಹಾವೇರಿಯಲ್ಲಿ ಒಬ್ಬರು ಕೊರೋನಾ ವೈರಸ್ ನಿಂದ ಮೃತಪಟ್ಟಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

No Comments

Leave A Comment