Log In
BREAKING NEWS >
ಮುಂಬಯಿಗೆ ಮತ್ತೆ ಮಳೆ ಭೀತಿ : ಮುಂದಿನ ವಾರ ಧಾರಾಕಾರ ಮಳೆ ಸಾಧ್ಯತೆ......ಭಾರಿ ಮಳೆ-ಪ್ರವಾಹ: ಕರ್ನಾಟಕದ ಕನಿಷ್ಟ 100 ರಸ್ತೆಗಳು, ಸೇತುವೆಗಳಿಗೆ ಹಾನಿ!....

ಯೋಗೀಶ್ ಹತ್ಯೆ ಪ್ರಕರಣ: ಬಾಗಲಕೋಟೆಯಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ

ಡುಪಿ: ಕೆಲ ದಿನಗಳ ಹಿಂದೆ ತೆಂಕನಿಡಿಯೂರು ಗ್ರಾಮದ ಲಕ್ಷ್ಮೀನಗರದಲ್ಲಿ ನಡೆದಿದ್ದ ಯೋಗೀಶ್ ಪೂಜಾರಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೋರ್ವ ಆರೋಪಿಯನ್ನು ಸೆರೆ ಹಿಡಿಯಲಾಗಿದೆ.

ಉಡುಪಿ ಬೈಲಕೆರೆ ನಿವಾಸಿ ಅನೂಪ್ ಕುಂದರ್ (38) ಬಂಧಿತ ಆರೋಪಿ. ಬಾಗಲಕೋಟೆಯಲ್ಲಿ ತಲೆಮರೆಸಿಕೊಂಡಿದ್ದ ಈತನನ್ನು ಪೊಲೀಸರು ಬಂಧಿಸಿ ಕರೆತಂದಿದ್ದಾರೆ.

ವೃತ್ತಿಯಲ್ಲಿ ಎಲೆಕ್ಟ್ರಿಶನ್ ಆಗಿರುವ ಈತ ಯೋಗೀಶ್ ಪೂಜಾರಿ ಕೊಲೆ ಪ್ರಕರಣದಲ್ಲಿ ಭಾಗಿಯಾಗಿದ್ದ ಎನ್ನಲಾಗಿದೆ. ಕೃತ್ಯಕ್ಕೆ ಬಳಸಿದ್ದ ಬೈಕ್ ಅನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಆರೋಪಿ ಬಾಗಲಕೋಟೆಯಲ್ಲಿ ತಲೆ ಮರೆಸಿಕೊಂಡಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ಪೊಲೀಸರು ತೆರಳಿ ಬಂಧಿಸಿದ್ದಾರೆ. ಉಡುಪಿಗೆ ಕರೆತಂದಿರುವ ಈತನನ್ನು ಇಂದು ನ್ಯಾಯಾಧೀಶರ ನಿವಾಸದಲ್ಲಿ ಹಾಜರುಪಡಿಸಲಾಗುವುದು ಎಂದು ಮೂಲಗಳು ತಿಳಿಸಿದೆ.

ಕಳೆದ ಸೋಮವಾರ ರಾತ್ರಿ ಮೀನುಗಾರಿಕಾ ಕೆಲಸದಿಂದ ಮನೆಗೆ ಹಿಂದುರುಗುತ್ತಿದ್ದ ಯೋಗೀಶ್ ಪೂಜಾರಿಯನ್ನು ರಸ್ತೆಯಲ್ಲಿ ಅಡ್ಡಗಟ್ಟಿ ಇರಿದು ಕೊಲೆ ಮಾಡಲಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಸುಜಿತ್ ಪಿಂಟೋ, ವಿನಯ ದೇವಾಡಿಗ, ರೋಹಿತ್ ಪಿಂಟೋ ಮತ್ತು ಪ್ರದೀಪ್ ಪೂಜಾರಿ ಎಂಬವರನ್ನು ಬಂಧಿಸಲಾಗಿದೆ. ಇನ್ನೋರ್ವ ಆರೋಪಿ ಗಿರೀಶ್ ತಲೆಮರೆಸಿಕೊಂಡಿದ್ದು, ಪೊಲೀಸರು ಶೋಧ ಕಾರ್ಯ ಮುಂದುವರಿಸಿದ್ದಾರೆ.

No Comments

Leave A Comment